ಚಿತ್ರದುರ್ಗ, ಏ.07: ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ನಂ. 369 ರಲ್ಲಿ ಇಂದು (ಭಾನುವಾರ) ಬೆಳಿಗ್ಗೆ 4 ಗಂಟೆ ಸುಮಾರಿಗೆ ನಡೆದಿದೆ.
ಬೆಂಗಳೂರಿನಿಂದ ಚಿತ್ರದುರ್ಗ, ಹೊಳಲ್ಕೆರೆ, ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಬಸ್ ಹೊಳಲ್ಕೆರೆಯಿಂದ ಎರಡು ಕಿ.ಮೀ. ಸಮೀಪದ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ.
ಮೃತರ ಗುರುತು ಇಲ್ಲ. ಬಸ್‌ನಲ್ಲಿ 50 ಜನರು ಪ್ರಯಾಣಿಸುತ್ತಿದ್ದರು. 33 ಜನರು ಗಾಯಗೊಂಡಿದ್ದು, 18 ಮಂದಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ, 6 ಮಂದಿ ದಾವಣಗೆರೆ ಮತ್ತು 9 ಮಂದಿಯನ್ನು ಶಿವಮೊಗ್ಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಹೊಳಲ್ಕೆರೆ ಪೊಲೀಸ್ ಠಾಣೆಯ ಪಿಎಸ್ ಐ ಸುರೇಶ್ ಪರಿಶೀಲನೆಯನ್ನು ನೀಡಿ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.