Breaking
Tue. Dec 24th, 2024

ಬಿಜೆಪಿ. ಜೆಡಿಎಸ್. ಸಮನ್ವಯ ಸಮಿತಿ ಹಾಗೂ ಲೋಕಸಭಾ ಚುನಾವಣೆ ಮಹತ್ವದ ಸಭೆ ಉದ್ಘಾಟನೆ…!

ಚಿತ್ರದುರ್ಗ, ಏಪ್ರಿಲ್, 08 : ದೇಶದ ಏಳಿಗೆ ಭಾರತ ಸುರಕ್ಷಿತವಾಗಿರಬೇಕಾದರೆ ಮತ್ತೊಮ್ಮೆ ನರೇಂದ್ರಮೋದಿ ಪ್ರಧಾನಿಯಾಗಬೇಕು. ಅದಕ್ಕಾಗಿ ಕಾರ್ಯಕರ್ತರು ಪ್ರತಿ ಮನೆಗೆ ಹೋಗಿ ಯುದ್ಧೋಪಾದಿಯಲ್ಲಿ ಸೈನಿಕರಂತೆ ಕೆಲಸ ಮಾಡಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು. ಉಮಾಪತಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಬಿಜೆಪಿ. ಜೆಡಿಎಸ್. ಸಮನ್ವಯ ಸಮಿತಿ ಹಾಗೂ ಲೋಕಸಭಾ ಚುನಾವಣೆ ಮಹತ್ವದ ಸಭೆಯನ್ನು ಆಯೋಜಿಸಿದೆ.

ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರಮೋದಿ ಮಾಡಿರುವ ಸಾಧನೆ ಬೂತ್, ವಾರ್ಡ್,ಗಳಲ್ಲಿ ಸಂಚರಿಸಿ ಜನರಿಗೆ ತಿಳಿಸಿ ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ. ಮುಂದಿನ ಮೂರು ವರ್ಷಗಳಲ್ಲಿ ಭಾರತ ಶ್ರೀಮಂತ ಪಟ್ಟಿಯಲ್ಲಿ ವಿಶ್ವದಲ್ಲಿಯೇ ಮೂರನೆ ಸ್ಥಾನಕ್ಕೆ ಬರಲಿದೆ. 25 ಕೋಟಿ ಜನ ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ದೇವಾಲಯಗಳನ್ನು ಕಟ್ಟುವುದು ಎಷ್ಟು ಮುಖ್ಯವೋ, ಶೌಚಾಲಯಗಳನ್ನು ಕಟ್ಟುವುದು ಅಷ್ಟೆ ಮುಖ್ಯವೆಂದು ತಿಳಿದು ನರೇಂದ್ರಮೋದಿ ದೇಶದಲ್ಲಿ ಕೋಟಿ ಕೋಟಿ ಶೌಚಾಲಯಗಳನ್ನು ನಿರ್ಮಿಸಿದ್ದಾರೆ. 

ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಪಡಿಸಿ ಭಂಡತನದ ಭಾಷಣ ಮಾಡುತ್ತಿರುವುದಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ನೂರಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಬಡವರ ಮಕ್ಕಳ ಡಾಕ್ಟರ್‌ಗಳಾಗಲು ಮೋದಿ ಮೆಡಿಕಲ್ ಕಾಲೇಜುಗಳ ನಿರ್ಮಾಣಕ್ಕೆ ಒತ್ತು ಕೊಟ್ಟ ಪ್ರಯುಕ್ತ ಹತ್ತು ವರ್ಷಗಳಲ್ಲಿ ಒಂದು ಲಕ್ಷದ ಐವತ್ತು ಸಾವಿರ ಡಾಕ್ಟರ್‌ಗಳು ಹೊರ ಬಂದಿದ್ದಾರೆ. ಮೋಸಗಾರ ಪಕ್ಷ ಕಾಂಗ್ರೆಸ್ ಅನ್ನು ನಂಬಬೇಡಿ. ಜಾತಿ ಧರ್ಮಗಳ ಮಧ್ಯೆ ವಿಷಬೀಜ ಬಿಡುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿಯವರು ಯಾವುದೇ ಜಾತಿ ಧರ್ಮವನ್ನು ಚುನಾವಣೆಗೆ ಬಳಸಲಿಲ್ಲ. ಭಯೋತ್ಪಾದಕರನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್. ಮೋದಿ ಆಡಳಿತದಲ್ಲಿ ಭಯೋತ್ಪಾದಕರು ಬಿಲ ಸೇರಿದ್ದಾರೆ. ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗೂ ಇಲ್ಲ. ಅದಕ್ಕಾಗಿ ಮೋದಿ ಕೈಪಡಿಸಿ ಮೂರನೆ ಬಾರಿಗೆ ಪ್ರಧಾನಿಯಾಗಲು ಸಹಕರಿಸಿದರು ಎಂದು ಕಾರ್ಯಕರ್ತರಲ್ಲಿ ಗೋವಿಂದ ಕಾರಜೋಳ ವಿನಂತಿಸಿದರು. 

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಗೋವಿಂದ ಕಾರಜೋಳರವರು ನೀರಾವರಿ ಸಚಿವರಾಗಿ ರೈತರಿಗೆ ಅನೇಕ ಚೆಕ್‌ಗಳನ್ನು ನೀಡಿದ್ದಾರೆ. ಅಪ್ಪರ್‌ಭದ್ರಾಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಲ್ಲಿ ಇವರ ಪಾತ್ರ ಬಹಳಷ್ಟಿದೆ. ನರೇಂದ್ರಮೋದಿಯನ್ನು ಮೂರನೆ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಮಾಡಲು ಪ್ರಜೆಗಳು ಕಾಯುತ್ತಿದ್ದಾರೆ. ಹಳ್ಳಿ ಪ್ರತಿಯಲ್ಲಿಯೂ ಸಿ.ಸಿ. ರಸ್ತೆ ಆಗಿದೆ ಎಂದರೆ ಅದಕ್ಕೆ ಗೋವಿಂದ ಕಾರಜೋಳ ಕಾರಣ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಎರಡು ಪಕ್ಷಗಳ ಕಾರ್ಯಕರ್ತರನ್ನು ಕೋರಿದರು. 

ಕೋವಿಡ್ ಸಂದರ್ಭದಲ್ಲಿ ಯಾರು ಹಸಿವಿನಿಂದ ನರಳಬಾರದೆಂದು ಎಂಬತ್ತು ಕೋಟಿ ಜನರಿಗೆ ಉಚಿತ ಪಡಿತರ ನೀಡುತ್ತಿದ್ದಾರೆ. ಜೊತೆಗೆ ಉಚಿತ ಲಸಿಕೆಯನ್ನು ಕೊಡಿಸಲಾಯಿತು ದೇಶದ ಜನ ಆರೋಗ್ಯವಾಗಿದ್ದಾರೆ. ಪಾಕಿಸ್ತಾನ, ಶ್ರೀಲಂಕಾದಲ್ಲಿ ಆಹಾರಕ್ಕೆ ಹಾಹಾಕಾರವಿದೆ. ನಮ್ಮ ದೇಶದ ಯಾವುದೇ ಪರಿಸ್ಥಿತಿಯಿಲ್ಲ. ವಿದೇಶಗಳಲ್ಲಿ ಭಾರತದ ಕೀರ್ತಿಯನ್ನು ಹೆಚ್ಚಿಸಿರುವ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡೋಣ ಎಂದು ಹೇಳಿದ್ದಾರೆ.

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ ಭಾರತೀಯ ಜನತಾಪಕ್ಷಕ್ಕೆ ತನ್ನದೆ ಆದ ಶಕ್ತಿಯಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿಜೆಪಿ. ಜೊತೆ ಮೈತ್ರಿ ಮಾಡಿಕೊಂಡಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ. ಗೋವಿಂದ ಕಾರಜೋಳರವರು ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಸಂಶಯವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಎಂದು ಭರವಸೆ ನೀಡಿದ್ದಾರೆ. 

ಜೆಡಿಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ ದೇಶದ ಅಭಿವೃದ್ದಿ ದೃಷ್ಟಿಯಿಂದ ನಮ್ಮ ಪಕ್ಷ ಬಿಜೆಪಿ. ಜೊತೆ ಮೈತ್ರಿ ಮಾಡಿಕೊಂಡಿದೆ. ಬೂತ್ ಮಟ್ಟದಲ್ಲಿ ಉಭಯ ಪಕ್ಷಗಳು ಒಂದಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಅಭ್ಯರ್ಥಿ ಗೋವಿಂದ ಕಾರಜೋಳರವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆಂದು ಹೇಳಿದರು. 

ಅಮಿತ್ಷಾ ಚಿತ್ರದುರ್ಗಕ್ಕೆ ಬಂದಾಗ ಮದಕರಿನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ವಾಗ್ದಾನ ಮಾಡಿದರು. ಅದು ಮುನ್ನೆಲೆಗೆ ಬರುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಬಿಜೆಪಿ. ಸಂದರ್ಭಗಳಲ್ಲಿ ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡುತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಸಸ್ ದೇಶಕ್ಕೆ ಗ್ಯಾರೆಂಟಿಯಾಗಿರುವ ನರೇಂದ್ರಮೋದಿ ನಡುವಿನ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬೇಕು. ಶತ್ರು ರಾಷ್ಟ್ರಗಳು ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದನ್ನು ತಡೆಯುವ ಹುನ್ನಾರ ನಡೆಸುತ್ತಿರುವುದನ್ನು ಮಾಧ್ಯಮಗಳು ಬಹಿರಂಗಪಡಿಸಿವೆ. ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಮೋದಿ ಕೈಬಲಪಡಿಸಿ ಎಂದು ಕಾರ್ಯಕರ್ತರು ಕೇಳಿಕೊಂಡರು. 

ಜೆಡಿಎಸ್.ಜಿಲ್ಲಾಧ್ಯಕ್ಷ ಜಯಣ್ಣ ಮಾತನಾಡಿ ನರೇಂದ್ರಮೋದಿಯನ್ನು ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಿ ಮಾಡಬೇಕೆಂದು ನಮ್ಮ ಪಕ್ಷದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿಜೆಪಿ.ಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಜೆಡಿಎಸ್.ಅಧಿಕಾರದಲ್ಲಿರುವ ಸಂದರ್ಭದಲ್ಲಿ ಕೈಗೊಂಡ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಿಳಿಸಿ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸುವಂತೆ ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ವಿನಂತಿಸಿದರು. 

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎನ್.ರವಿಕುಮಾರ್ ಮಾತನಾಡುತ್ತ ರೈತರಿಗೆ ಸಹಾಯವಾಗುವ ಕಾರ್ಯಕ್ರಮಗಳನ್ನು ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಅನುಷ್ಠಾನಗೊಳಿಸಿದೆ. ಯಾರ ಕನಸು ಮನಸ್ಸಿನಲ್ಲಿಯೂ ನೋಡಲು ಆಗಲ್ಲ. ದೇಶಕ್ಕಾಗಿ ತನ್ನ ಜೀವನವನ್ನೇ ಮುಡುಪಾಗಿಟ್ಟಿರುವ ನರೇಂದ್ರಮೋದಿಯನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಯಾವುದೇ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. 

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ರೈತರು, ಮಹಿಳೆಯರು, ಯುವಕರಿಗೆ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿಯವರು ಕೊಟ್ಟ ಕೊಡುಗೆಯನ್ನು ಪ್ರತಿ ಮನೆಗೆ ಹೋಗಿ ಹೇಳಬೇಕು. ಪ್ರತಿ ಕುಟುಂಬದಲ್ಲಿ ಒಬ್ಬರಲ್ಲ ಒಬ್ಬರು ಕೇಂದ್ರದ ಯೋಜನೆಗಳನ್ನು ಹೊಂದಿರುತ್ತಾರೆ. ಕಾರ್ಯಕರ್ತರು ಯಾರಿಗೂ ಹಿಂಜರಿಕೆಯಿಲ್ಲದೆ ಹೋಗಿ ಮತ ಕೇಳಿ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ನಮ್ಮ ನಾಯಕರು ಕನಸು ಕಾಣಿಸಬೇಕಾಗಿರುವುದು ಎಲ್ಲರ ಕರ್ತವ್ಯ ಎಂದು. 

ಭಾರತ ವಿಶ್ವಗುರುವಾಗಬೇಕಾಗಿರುವುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿ ಎಂದು ಭಿನ್ನವಿಸಿಕೊಂಡರು. ಜೆಡಿಎಸ್. ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಪ್ರತಾಪ್ಜೋಗಿ, ಬಿಜೆಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್‌ಸಿದ್ದಾಪುರ, ಸಂಪತ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್, ಡಾ.ಸಿದ್ದಾರ್ಥ, ನಗರಸಭೆ ಸದಸ್ಯರಾದ ಹರೀಶ್, ಸುರೇಶ್, ದೀಪು ಅನೇಕರು ವೇದಿಕೆಯಲ್ಲಿದ್ದರು.

Related Post

Leave a Reply

Your email address will not be published. Required fields are marked *