Breaking
Tue. Dec 24th, 2024

ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ರೆಡ್‌ಹ್ಯಾಂಡಾಗಿ ಲೋಕ ಬಲೆಗೆ..!

ಬೆಂಗಳೂರು: 9 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ರೆಡ್‌ಹ್ಯಾಂಡಾಗಿ ಲೋಕ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ.

ಹೋಟೆಲ್‌ವೊಂದರ ಪರವಾನಗಿ  ಕೊಡಲು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಭೋಪಾಲ್ 9 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟದ್ದ. ಈ ಬಗ್ಗೆ ಮಂಗಳೂರು ಮೂಲದ ಹೋಟೆಲ್ ಮಾಲೀಕ ದೀಕ್ಷಿತ್ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.

ಲಂಚ ಪಡೆಯುತ್ತಿದ್ದಾಗಲೇ ಕಾರ್ಮಿಕ ಭವನದಲ್ಲೇ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

Related Post

Leave a Reply

Your email address will not be published. Required fields are marked *