Breaking
Wed. Dec 25th, 2024

ಬಳ್ಳಾರಿ ಜಿಲ್ಲಾ ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ..!

ದ್ವಿತೀಯ ಪಿಯುಸಿ ಪಾಸಾಗಿದ್ಯಾ.. ಸರ್ಕಾರಿ ಉದ್ಯೋಗ ಬೇಕಾ.. ಹಾಗಿದ್ರೆ ಇಲ್ಲಿದೆ ನೋಡಿ ಜಾಬ್‌ ಆಫರ್. ಬಳ್ಳಾರಿ ಜಿಲ್ಲಾ ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ. 

ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯದಲ್ಲಿ ಉಳಿಕೆ ವೃಂದದಲ್ಲಿ ಖಾಲಿ ಇರುವ 1 ಬೆರಳಚ್ಚುಗಾರ ಮತ್ತು 01 ಬೆರಳಚ್ಚು ನಕಲುಗಾರ ಹುದ್ದೆಗೆ, ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 12 ಬೆರಳಚ್ಚುಗಾರರು, 7 ಬೆರಳಚ್ಚು ನಕಲುಗಾರರು ಹುದ್ದೆಗಳ ಭರ್ತಿಗೆ ಅಧಿಸೂಚಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು ಹುದ್ದೆಗೆ ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಉತ್ತೀರ್ಣ ಅಥವಾ
  • 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ
  • ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
  • ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ. 

ವಯಸ್ಸಿನ ಅರ್ಹತೆಗಳು 

  • ಯಾವುದೇ ಹುದ್ದೆಗೆ ಅಪ್ಲಿಕೇಶನ್‌ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
  • ಗರಿಷ್ಠ ವಯೋಮಿತಿ ಅರ್ಹತೆಗಳು ಜಾತಿವಾರು ಕೆಳಗಿನಂತಿದೆ.
  • – ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ.
  • – ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
  • – ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 06-04-2024

ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06-05-2024 ರ ರಾತ್ರಿ 11-59 ರವರೆಗೆ.

ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 08-05-2024 ರ ರಾತ್ರಿ 11-59 ರವರೆಗೆ. 

ಅರ್ಜಿ ಶುಲ್ಕ ವಿವರ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250.

2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100.

ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. 

ವೇತನ ಶ್ರೇಣಿ ವಿವರ

ಬೆರಳಚ್ಚುಗಾರರು: ರೂ.21400-42000.

ಬೆರಳಚ್ಚು ನಕಲುಗಾರರು: ರೂ.21400-42000.

ಉದ್ಯೋಗ ವಿವರ

INR 21400 to 42000 /Month. 

ನೇಮಕಾತಿ ಸಂಸ್ಥೆ

ಸಂಸ್ಥೆಯ ಹೆಸರು ಬಳ್ಳಾರಿ ಸಿವಿಲ್ ನ್ಯಾಯಾಲಯ

ವೆಬ್‌ಸೈಟ್‌ ವಿಳಾಸ https://ballari.dcourts.gov.in/

Related Post

Leave a Reply

Your email address will not be published. Required fields are marked *