Breaking
Wed. Dec 25th, 2024

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಕರ್ನಾಟಕ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 81.15ರಷ್ಟು ಫಲಿತಾಂಶ ಬಂದಿದೆ. 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಯನ್ನು ಪಡೆಯಲು ಏಪ್ರಿಲ್ 16 ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 19 ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್ 14 ರಿಂದ 20 ರವರೆಗೆ ಅರ್ಜಿ ಸಲ್ಲಿಸಿ.

ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್‌ಇಬಿಯು ಈಗಲೇ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.in ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಮರುಮೌಲ್ಯಮಾಪನ 2024ಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಿ:

ಅಧಿಕೃತ ವೆಬ್‌ಸೈಟ್ – kseab.karnataka.gov.in ಗೆ ಭೇಟಿ ನೀಡಿ. ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ

ನಮೂನೆಯಲ್ಲಿ ವಿವರಗಳನ್ನು ಅರ್ಜಿ ಸಲ್ಲಿಸಿ

ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ

ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ

ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಅನ್ನು ಸ್ವೀಕರಿಸುತ್ತಾರೆ. ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್‌ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್ ಮಾಡಿದ ಪ್ರತಿ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ

ರಾಜ್ಯದಲ್ಲಿ ಮಾ.1 ರಿಂದ ಮಾರ್ಚ್ 22 ರವರೆಗೆ 1,124 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿವೆ. ಪ್ರಸಕ್ತ ವರ್ಷ 6.9 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಮೂರು ಭಾಗಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಯಿತು.

ಫಲಿತಾಂಶ ಪರಿಶೀಲನೆ

karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.

ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ ಯಾವ ವಿಭಾಗವೆಂದು ಕ್ಲಿಕ್ ಮಾಡಬೇಕು. ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.

ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಗೋಚರಿಸುತ್ತದೆ.

ನಂತರ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

Related Post

Leave a Reply

Your email address will not be published. Required fields are marked *