ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಈ ಫಲಿತಾಂಶದಲ್ಲಿ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಇದರಲ್ಲಿ ಈ ಬಾರಿಯೂ ಸಹ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್ಸೈಟ್ https://karresults.nic.in/ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
ವಿಶೇಷ ಸೂಚನೆ : ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದ ಎಲ್ಲಾ ವಿದ್ಯಾರ್ಥಿಗಳಿಗೂ ಹೃತ್ಪೂರ್ವಕವಾದ ಅಭಿನಂದನೆಗಳು ಹಾಗೂ ರಾಜ್ಯಕ್ಕೆ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮುಂದಿನ ಬಾರಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳಬೇಕೆಂದು ಮನವಿ ಆವಿಷ್ಕಾರ್ ನ್ಯೂಸ್