ಚಿತ್ರದುರ್ಗ ಲೋಕಸಭಾ ಚುನಾವಣೆ ಪ್ರಚಾರವು ಕಾಂಗ್ರೆಸ್ ಅಭ್ಯರ್ಥಿಯಾದ ಬಿ.ಎನ್. ಚಂದ್ರಪ್ಪ , ಶ್ರೀ ಜಗದ್ಗುರುತರಳಬಾಳು ಜಗದ್ಗುರು ಡಾ .ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಯವರು ಯುಗಾದಿ ಹಬ್ಬದ ಶ್ರೀ ಮಠದ ಮುಂಭಾಗದಲ್ಲಿ ಚಂದ್ರ ದರ್ಶನ ಪಡೆದರು.
ನಗರದ ವಿವಿಧೆಡೆ ಬುಧವಾರ ಮತಯಾಚಿಸಿ ಅವರು ಮಾತನಾಡಿದರು, ಬೆಲೆ ಏರಿಕೆಗೆ ಜನಸಾಮಾನ್ಯರು ತತ್ತರಿಸಿದ್ದಾರೆ. ಸಿಲಿಂಡರ್ ಬಿಟ್ಟು, ಕಟ್ಟಿಗೆ ಹೊಳೆಗಳತ್ತ ಜನ ಗಮನಹರಿಸುತ್ತಿದ್ದಾರೆ.
ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ನಿತ್ಯ ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದು ದೂರಿದರು. ಜಾತಿ, ಧರ್ಮಗಳ ಮಧ್ಯೆ ವಿಷ ಬಿತ್ತಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರಿಗೆ ರಾಜ್ಯದ ಮತದವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ.
ಅದೇ ಮಾದರಿಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಶ್ವಾಸ. ಕಾಂಗ್ರೆಸ್ ಪಕ್ಷಕ್ಕೆ ಭಗವದ್ಗೀತೆ, ಬೈಬಲ್, ಕುರಾನ್ ಸೇರಿದಂತೆ ಎಲ್ಲ ಧರ್ಮಗ್ರಂಥಗಳ ಕುರಿತು ಗೌರವ ಇದೆ. ಆದರೆ, ಬಿಜೆಪಿ ನಾಯಕರಿಗೆ ಯಾವ ಧರ್ಮಗಳ ಗ್ರಂಥದ ಬಗ್ಗೆ ಗೌರವ ಇಲ್ಲ. ಭಗವದ್ಗೀತೆ ಕುರಿತು ಕೂಡ ಗೌರವ ಇಲ್ಲ ಎಂಬುದಕ್ಕೆ ಅವರು ನಡೆಸುತ್ತಿರುವ ಭ್ರಷ್ಟಾಚಾರ, ಗಲಭೆ, ಕೋಮುಧ್ವೇಶದ ಭಾಷಣವೇ ಸಾಕ್ಷಿ ಎಂದರು.
ಕ್ಷೇತ್ರದಲ್ಲಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕೆಂದು ಎಲ್ಲ ಸಮುದಾಯದವರು ಸ್ವಯಂ ಆಗಿ ಸಂಘಟನೆಯಲ್ಲಿ ತೊಡಗಿದ್ದಾರೆ. ಬಸವಣ್ಣನ ಆಶಯದಡಿ ರಚನೆಗೊಂಡಿರುವ ಸಂವಿಧಾನವನ್ನು ಬದಲಿಸಲು ಮುಂದಾಗಿರುವ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ.
ನೋಟ್ ಬ್ಯಾನ್, ಜಿ.ಎಸ್.ಟಿ., ಬೆಲೆ ಏರಿಕೆ ಕಾರಣಕ್ಕೆ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಬರುವ ದಿನಗಳಲ್ಲಿ ನೆಮ್ಮದಿ ಜೀವನಕ್ಕೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಜನರೇ ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್. ಆಂಜನೇಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಲಿಂಗವ್ವನಾಗತಿಹಳ್ಳಿ ತೀಪ್ಪೇಸ್ವಾಮಿ ಬಸವರಾಜಯ್ಯ ವಿಜಯ ಕುಮಾರ್ ಅವರನ್ನು ಸಂಪರ್ಕಿಸಿದರು.
ತರಳಬಾಳು ಜಗದ್ಗುರು ಡಾ .ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಯುಗಾದಿ ಹಬ್ಬದ ಶ್ರೀ ಮಠದ ಮುಂಭಾಗದಲ್ಲಿ ಚಂದ್ರ ದರ್ಶನ ಮಾಡುವ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಕಾಂಗ್ರೆಸ್ ಪಕ್ಷದ ಲೋಕ ಸಭಾ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಹಾಗೂ ಲಿಂಗವ್ವ ನಾಗತಿಹಳ್ಳಿ ತಿಪ್ಪೇಸ್ವಾಮಿ, ಬಸವರಾಜಯ್ಯ, ನಾಗರಾಜ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಲಮ್ಮ ಬೈರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ತಾಲೂಕು ಕೆ.ಡಿ.ಪಿ ಸದಸ್ಯ ವಿಜಯ್ ಕುಮಾರ್, ಮುಂಬೈನ ಮಠದ ಭಕ್ತರಾದ ಅಸೀಮ್ ನಾಥ್ ಮುಖರ್ಜಿ ಕುಟುಂಬದವರು ಇನ್ನೂ ಮುಂತಾದ ಗ್ರಾಮಗಳ ಗ್ರಾಮಸ್ಥರು ಇದ್ದರು.