ಚಳ್ಳಕೆರೆ, ಏಪ್ರಿಲ್, 10 : ತಾಲ್ಲೂಕಿನ ಸಾಣಿಕೆರೆಯ ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ಇಡೀ ಜಿಲ್ಲೆಯಲ್ಲಿ ಪ್ರತಿಷ್ಠಿತ ಸಂಸ್ಥೆಯಾಗಿ ದಾಪುಗಾಲು ಇಡುತ್ತಾ ಗುಣಮಟ್ಟದ ಶಿಕ್ಷಣಕ್ಕೆ ಒಮ್ಮೆ ತಿರುಗಿ ನೋಡುವಂತೆ ಸಾಧನೆ ಮಾಡಿದೆ.
2023-24 ನೇ ಸಾಲಿನ ಪರೀಕ್ಷೆಗೆ ಒಟ್ಟು 97 ವಿದ್ಯಾರ್ಥಿಗಳು ಹಾಜರಾಗಿದ್ದಾರೆ, ಇದರಲ್ಲಿ 97 ವಿದ್ಯಾರ್ಥಿಗಳು ಸಹ ಉತ್ತೀರ್ಣರಾಗಿದ್ದಾರೆ ಮೂಲಕ ಶೇ .100% ಫಲಿತಾಂಶವನ್ನು ಪಡೆದಿದ್ದಾರೆ, ಇದರಲ್ಲಿ 10 ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ನೂರು ಅಂಕಗಳನ್ನು ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹಾಗೂ ಒಟ್ಟು 52 ವಿದ್ಯಾರ್ಥಿಗಳು ಉತ್ತೀರ್ಣರಾದರೆ, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ.
ಉತ್ತಮ ಸಾಧನೆ ತೋರಿದ ಹಾಗೂ ಶ್ರಮಿಸಿದಂತಹ ಉಪನ್ಯಾಸಕರು, ಪ್ರಾಂಶುಪಾಲರಿಗೆ ಸಂಸ್ಥೆಯ ಅಧ್ಯಕ್ಷರಾದ ಡಿ ಟಿ ರವೀಂದ್ರರವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ.