Breaking
Wed. Dec 25th, 2024

ಐವರು ಪೊಲೀಸ್‌ ಅಧಿಕಾರಿಗಳು ಹೋಗುತ್ತಿದ್ದ ಜೀಪ್‌ ಮತ್ತು ಬಸ್‌ ನಡುವೆ ಅಪಘಾತ..!

ಬೆಂಗಳೂರು : ಲೋಕಸಭಾ ಚುನಾವಣೆ 2024 ರಂದು ಐವರು ಪೊಲೀಸ್ ಅಧಿಕಾರಿಗಳು ಹೋಗುತ್ತಿದ್ದ ಜೀಪ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ತಮಿಳುನಾಡಿನ ಕಿಲ್ಪೆನ್ನತುರ್ ಠಾಣಾ ವ್ಯಾಪ್ತಿಯ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಕರ್ನಾಟಕದ ಅಧಿಕಾರಿ ಸೇರಿ ಇಬ್ಬರು ಸ್ಥಳದಲ್ಲೇ ಕಾಣಿಸಿಕೊಂಡಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯ ಕರ್ನಾಟಕದಿಂದ ಎಲೆಕ್ಷನ್ ಡ್ಯೂಟಿಗೆ ಹೋಗಿದ್ದ ಪೊಲೀಸ್ ಅಧಿಕಾರಿ, ಕೆಎಸ್‌ಆರ್‌ಪಿ ಸಹಾಯಕ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡು ಕಾನ್ಸ್‌ಟೇಬಲ್ ದಿನೇಶ್ ಕಾಣಿಸಿಕೊಂಡಿದ್ದಾರೆ.

ಸಂಜೆ ನಾಲ್ಕು ಗಂಟೆ ಸುಮಾರಿಗೆ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಇಬ್ಬರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗುವುದು.

ಪ್ರಭಾಕರ್ ಕುಟುಂಬಸ್ಥರಿಗೆ ಮಾಹಿತಿ ಲಭ್ಯವಾಗಿದೆ. ಅಪಘಾತದ ರಭಸಕ್ಕೆ ಜೀಪ್ ಛಿದ್ರವಾಗಿದ್ದು, ಬಸ್‌ನ ಮುಂಭಾಗ ಸಹ ಜಖಂ ಆಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹೇಮಂತ್ ಕುಮಾರ್ (ಡೆಪ್ಯೂಟಿ ಕಮಾಂಡರ್), ವಿಠ್ಠಲ್ ಗಡಾದರ್ (ಹೆಡ್ ಕಾನ್ಟೇಬಲ್), ಜಯಕುಮಾರ್ (ಕಾನ್ಸ್ ಟೇಬಲ್) ಮೂವರನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Related Post

Leave a Reply

Your email address will not be published. Required fields are marked *