ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಚುನಾವಣಾ ಪ್ರಚಾರದಲ್ಲಿ ಸಕ್ರೀಯವಾಗಿ ಭಾಗವಹಿಸಿ ಜಯಶೀಲರನ್ನಾಗಿ ಮಾಡುವ ಉದ್ದೇಶದಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾದಿಗ ಸಮುದಾಯುದ ಮುಖಂಡರ ಸಭೆಯನ್ನು ಸಮುದಾಯದ ಅಗ್ರ ಗಣ್ಯನಾಯಕ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರಾದ ಹೆಚ್. ಆಂಜನೇಯ ಇವರ ನೇತೃತ್ವದಲ್ಲಿ ಏ. 12 ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಗರದ ಎನ್.ಬಿ.ಟಿ.ಫಂಕ್ಷನ್ ಹಾಲ್, ಆಜಾದ್ ಮಿಲ್ ಎದುರು, ರೈಲ್ವೆ ಸ್ಟೇಷನ್ ಹತ್ತಿರ ಸಭೆ ಕರೆಯಲಾಗಿದೆ. ಸಭೆಗೆ ಸಚಿವ ಕೆ.ಎಚ್.ಮುನಿಯಪ್ಪ,
ಕ್ಷೇತ್ರದ ಶಾಸಕರ, ಸಚಿವರ, ಸರ್ವ ಜನಾಂಗದ ಒಮ್ಮತದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಕೆಪಿಸಿಸಿ. ಪ್ರಧಾನ ಕಾರ್ಯದರ್ಶಿ ಡಾ.ಬಿ.ತಿಪ್ಪೇಸ್ವಾಮಿ ಜೆ.ಜೆ.ಹಟ್ಟಿ, ಲಿಡ್ಕರ್ ಮಾಜಿ ಅಧ್ಯಕ್ಷರಾದ ಓ.ಶಂಕರ್, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ (ಲಿಡ್ಕರ್) ಅಧ್ಯಕ್ಷರಾದ ಮುಂಡರಗಿ ನಾಗರಾಜ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಸವಿತ ರಘು ಇವರುಗಳಲ್ಲದೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಮತ್ತು ಮಾಜಿ ಸದಸ್ಯರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರು ಮತ್ತು ಕೆಪಿಸಿಸಿ.. ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಎಸ್.ಸಿ.ಘಟಕದ ಪದಾಧಿಕಾರಿಗಳು ಹಾಗೂ ಮಾದಿಗ ಸಮುದಾಯದ ಎಲ್ಲಾ ಪ್ರಮುಖ ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ.
ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದವರು ಆಗಮಿಸಬೇಕೆಂದು ಜಿಪಂ ಮಾಜಿ ಸದಸ್ಯರಾದ ಬಿ.ಪಿ.ಪ್ರಕಾಶ್ ಮೂರ್ತಿ, ಆರ್.ನರಸಿಂಹರಾಜು ಕೋರಿದ್ದಾರೆ.