ಹಿರಿಯೂರು : ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತವನ್ನು ಮೆಚ್ಚಿ ಬರುವ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಬೆಂಬಲಿಸಿ ಪಕ್ಷದ ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.
ತಾಲೂಕಿನಲ್ಲಿ ಜೆಜೆ ಹಳ್ಳಿ ಗ್ರಾಮದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರಿಗೆ ಕಾಂಗ್ರೆಸ್ ಪಕ್ಷದ ಶಾಲು ವಧಿಸಿ ಪಕ್ಷಕ್ಕೆ ಸ್ವಾಗತ ಕೋರಿ ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಜೈ ಜೈ ಹಳ್ಳಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ತಿಮ್ಮರಾಯಪ್ಪ ಮಾಜಿ ಸದಸ್ಯರಾದ ನಾಹೀದ್, ಸುರೇಶ್, ಮಂಜಣ್ಣ, ಈರಣ್ಣ, ಶೇಖರ್, ಚಿಕ್ಕಣ್ಣ, ಧನಂಜಯ್ ಮುಂತಾದವರು ಉಪಸ್ಥಿತರಿದ್ದರು.
ಸಚಿವ ಸುಧಾಕರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಯಾದರು. ಪಕ್ಷದ ಉಳಿವಿಗಾಗಿ ಮುಂಬರುವ ಲೋಕಸಭಾ ಚುನಾವಣೆಯ ಬಲಪಡಿಸಲು ಕಾಂಗ್ರೆಸ್ಸನ್ನು ಉತ್ತಮವಾಗಿ ರಾಜ್ಯದಲ್ಲಿ ಆಡಳಿತ ತರುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಶ್ರಮ ವಹಿಸುತ್ತೇವೆಂದು ಪ್ರಮಾಣ ಮಾಡಿದರು.