Breaking
Wed. Dec 25th, 2024

ಕುಡಿಯುವ ಸಮಸ್ಯೆ ಕುರಿತು ಸಚಿವರ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ…!

ಹಿರಿಯೂರು : ಎಷ್ಟೋ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಕೊರತೆ ಇದೆ. ಆದರೆ ಜನಪ್ರತಿನಿಧಿಗಳು ಮಾತ್ರ ಗಮನ ಹರಿಸುವುದೇ ಇಲ್ಲ. ಚುನಾವಣೆಯ ಹೊಸ್ತಿಲಲ್ಲಿ ಮಾತ್ರ ಜನರ ಮುಂದೆ ಬಂದು ಭರವಸೆಗಳನ್ನ ನೀಡಿ ಹೋಗುತ್ತಾರೆ. ಇದೀಗ ಮತ್ತೆ ಲೋಕಸಭಾ ಚುನಾವಣೆ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ತೆರಳಿದ ಸಂದರ್ಭದಲ್ಲಿ ಸಚುವ ಸುಧಾಕರ್ ಅವರಿಗೆ ದಿಂಡವರ ಗ್ರಾಮದ ಜನ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. 

ತಾಲೂಕಿನ ದಿಂಡವರ ಗ್ರಾಮ ಪಂಚಾಯತಿ ಕುಡಿಯುವ ನೀರಿನ ಸಮಸ್ಯೆ ಇದೆ. ಆ ಸಮಸ್ಯೆಯನ್ನು ಪರಿಹರಿಸಲಾಗಿದೆ ಈಗ ಚುನಾವಣಾ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಮತಯಾಚನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಸಚಿವರು ಗ್ರಾಮದೊಳಗೆ ಬರುತ್ತಿದ್ದಂತೆಯೇ ಸಚಿವರ ಕಾರಿಗೆ ಅಡ್ಡಲಾಗಿ ಮಲಗಿ ನೇರವಾಗಿ ವಾಪಾಸ್ ಕಳಿಸಿರುವ ಘಟನೆ ನಡೆದಿದೆ. 

ಗ್ರಾಮದಲ್ಲಿ ಕುಡಿಯುವ ಸಮಸ್ಯೆ ತೀವ್ರವಾಗಿದೆ, ಸಚಿವರು ಗಮನ ಹರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇತ್ತೀಚೆಗಷ್ಟೇ ಗ್ರಾಮದಲ್ಲಿ ಕುಡಿಯುವ ನೀರು ಪೂರೈಸುವಂತೆ ದಿಂಡವಾರ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಜೊತೆಗೆ ನೀರು ಪೂರೈಕೆ ಮಾಡದಿದ್ದರೆ ಚುನಾವಣೆಗೆ ಬಹಿಷ್ಕಾರ ಮಾಡಬೇಕೆಂದು ಎಚ್ಚರಿಕೆ ನೀಡಿದ್ದರು.

ಇಷ್ಟಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಶುಕ್ರವಾರ ಸಚಿವ ಡಿ ಸುಧಾಕರ್ ಅವರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿಎನ್ ಚಂದ್ರಪ್ಪ ಅವರ ಪರವಾಗಿ ಮತಯಾಚನೆ ಮಾಡಲು ಗ್ರಾಮಕ್ಕೆ ತೆರಳಿದ್ದಾರೆ ಗ್ರಾಮದ ಮಹಿಳೆಯರು, ಪುರುಷರು, ಮಕ್ಕಳಿಗೆ ಅಡ್ಡಲಾಗಿ ಮಲಗಿ, ಮುತ್ತಿಗೆ ಹಾಕಿದ್ದಲ್ಲದೆ, ಸಚಿವರಿಗೆ ಘೇರಾವ್ ಹಾಕಿ ವಾಪಸ್ ಕಳುಹಿಸಿದ್ದಾರೆ. ಸಚಿವರು ಕಾರಿನಿಂದ ಇಳಿದು ಮಾತನಾಡಲು ಗ್ರಾಮಸ್ಥರು ಅವಕಾಶ ಕೊಟ್ಟಿಲ್ಲ. ಪ್ರತಿಭಟನೆ ಕಾವು ರಂಗೇರುತ್ತಿದ್ದಂತೆಯೇ ಸಚಿವರು ಕಾರು ಇಳಿಯದೇ ಬಂದ ದಾರಿಗೆ ಸುಂಕ ಇಲ್ಲಂತೆ ವಾಪಸ್ ತೆರಳಿದ್ದಾರೆ. 

Related Post

Leave a Reply

Your email address will not be published. Required fields are marked *