ಶಿವಮೊಗ್ಗ : ತಾಲ್ಲೂಕಿನ ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆ (ಮಳೆ), ಆಯನೂರು ಬಳಿ ಮರ ಬುಡಮೇಲಾಗಿ ರಸ್ತೆಗೆ ಉರುಳಿ ಬಿದ್ದಿತ್ತು. ಕೆಲವು ಸಮಯ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು. ತೀರ್ಥಹಳ್ಳಿ, ಶಿಕಾರಿಪುರ ತಾಲೂಕುಗಳಲ್ಲಿ ಭಾರೀ ಮಳೆಯಾಗಿದೆ.
ಆಯನೂರು ಕೋಟೆ ಬಳಿ ಮೇಯಲು ಬಿಟ್ಟಿದ್ದ ಜಾಕೀರ್ ಹುಸೇನ್ ಎಂಬವರಿಗೆ ಸೇರಿದ 18 ಕುರಿಗಳು ಸಿಡಿಲು ಬಡಿದು ಸಾವನ್ನಪ್ಪಿವೆ. ಸುಮಾರು 3 ಲಕ್ಷ ರೂ. ನಷ್ಟವಾಗಿದೆ. ತಾಲೂಕಿನ ಕುಂಸಿ, ಆಯನೂರು, ಶಿವಮೊಗ್ಗ ಪಟ್ಟಣದ ವಿವಿಧೆಡೆ ಮಳೆಯಾಗಿದೆ.
ಇನ್ನೊಂದೆಡೆ ತೀರ್ಥಹಳ್ಳಿ, ಶಿಕಾರಿಪುರ ತಾಲ್ಲೂಕಿನ ವಿವಿಧೆಡೆಯು ಮಳೆಯಾದ ವರದಿಯಾಗಿದೆ. ಇದರಿಂದ ಈ ಭಾಗದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕೆಲವು ಗ್ರಾಮಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ