ಭದ್ರಾವತಿ : ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ. ಅಂಬೇಡ್ಕರ್ ವೃತ್ತದಿಂದ ದಲಿತ ಸಂಘಟನೆಗಳ ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲ್ಲೂಕು ಆಡಳಿತ, ನಗರಸಭೆ, ದಲಿತ ಸಂಘಟನೆಗಳು ಸಹಯೋಗದಲ್ಲಿ ಭಾನುವಾರ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಭಾರತ ರತ್ನ,ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿ ಸರಳವಾಗಿ ಆಚರಿಸಲಾಯಿತು.
ತಹಶೀಲ್ದಾರ್ ಕೆ.ಆರ್.ನಾಗರಾಜ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಗಂಗಣ್ಣ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ಗೋಪಾಲಪ್ಪ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ದಲಿತ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
.