ಶಿವಮೊಗ್ಗ : ಜಿಲ್ಲೆಯಾದ್ಯಂತ ಪೊಲೀಸರಿಂದ ರೌಡಿ ಆಸಾಮಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಘಟನೆ ವರದಿಯಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗಿನ ಜಾವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಮಾರ್ಗದರ್ಶನದಲ್ಲಿ ನಡೆದಿದೆ.
ರೌಡಿ ಆಸಾಮಿಗಳ ಮನೆಗಳನ್ನು ತಪಾಸಣೆ ನಡೆಸಿ ರೌಡಿ ಆಸಾಮಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲಿಸಿ, ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಲಾಗಿದೆ.