ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆ ಯುವಕನಿಗೆ ಚಾಕುವಿನಿಂದ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಶೋಕನಗರದ ನಿವಾಸಿ ಆಕಾಶ್ ಆಂಜನೇಯ (26) ಹತ್ಯೆಗೀಡಾದ ಯುವಕ. ಆತನ ಸ್ನೇಹಿತ ನವೀನ್ ಎಂಬಾತ ಕೊಲೆ ಮಾಡಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾತ್ರಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ವೇಳೆ ರಾಷ್ಟ್ರಪತಿ ಚೌಕ್ ನಲ್ಲಿ ಆಕಾಶ್ ಡ್ಯಾನ್ಸ್ ಮಾಡುತ್ತಿದ್ದಾಗ ಹಿಂದುಗಡೆಯಿಂದ ಬಂದ ನವೀನ್, ಆತನ ಬೆನ್ನಿಗೆ ಚೂರಿ ಹಾಕಿ ಪರಾರಿಯಾಗಿದ್ದಾನೆ. ಗಂಭೀರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕಾಶ್ ನನ್ನನ್ನು ಆಸ್ಪತ್ರೆಗೆ ಕರೆದೊಯ್ದರು ಬದುಕಿ ಉಳಿಯಲಿಲ್ಲ . ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು