ಆಂಧ್ರಪ್ರದೇಶದ : ಅನಂತಪುರ ಜಿಲ್ಲೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾನೆ. ಆದರೆ ಇದನ್ನು ಗಮನಿಸದ ಕಾರು ಚಾಲಕ 18 ಕಿಲೋ. ಮೀಟರ್ನಷ್ಟು ದೂರಕ್ಕೆ ಎಳೆದುಕೊಂಡು ಹೋಗಿದ್ದಾನೆ.
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪರಿಣಾಮ ಸ್ಥಳದಲ್ಲೇ ಬೈಕ್ ಸವಾರಿದ್ದಾನೆ. ಚಲಿಸುತ್ತಿದ್ದ ಟೊಯೊಟಾ ಇನ್ನೋವಾ ಕಾರಿನ ಮೇಲೆ ಶವ ಇದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತಕ್ಷಣ ದಾವಿಸಿದ ಅಧಿಕಾರಿಗಳು ವಾಹನವನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಮೃತ ಬೈಕ್ ಸವಾರರನ್ನು ಯರ್ರಿಸ್ವಾಮಿ ಎಂದು ಗುರುತಿಸಿದ್ದಾರೆ. ಕೂಡಲೇ ಸ್ಥಳದಿಂದ ಕಾರು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.