ಹಿರಿಯ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು. ಏಳು ಗಂಟೆಯಿಂದ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ, ನಂತರ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಈ ಕುರಿತು ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ದ್ವಾರಕೀಶ್ ಚಿತ್ರರಂಗದ ದೊಡ್ಡ ಆಸ್ತಿ. ಅವರ ಅಗಲಿಕೆ ಎಲ್ಲರಿಗೂ ತುಂಬಾ ನೋವಾಗಿದೆ. ಅವರು ಕೇವಲ ನಟರಲ್ಲ ನಿರ್ದೇಶಕ, ನಿರ್ಮಾಪಕ ಕೂಡ ಹೌದು. ನಾಳೆ ಚಿತ್ರರಂಗ ಬಂದ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸ್ವಯಂಪ್ರೇರಿತವಾಗಿ ಬಂದ್ ಮಾಡಬೇಕು ಅಂತ ಕೇಳಿಕೊಳ್ತೀನಿ. ಅವರು ಎಲ್ಲರಿಗೂ ದೊಡ್ಡ ಆಸ್ತಿ. ಅಂತ್ಯಕ್ರಿಯೆ ಬಗ್ಗೆ ಸರ್ಕಾರದ ಜೊತೆ ಮಾತಾಡ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಕಂಬನಿ ಮಿಡಿದ ರಜನಿಕಾಂತ್ : ದ್ವಾರಕೀಶ್ ಮತ್ತು ರಜನಿಕಾಂತ್ ಬಹುಕಾಲದ ಗೆಳೆಯರು. ದ್ವಾರಕೀಶ್ ಹೇಳಿದವರಿಗೆ ರಜನಿಕಾಂತ್ ಕಾಲ್ ಶೀಟ್ ಕೊಡಲಾಗಿದೆ ಎಂದು ದ್ವಾರಕೀಶ್ ಅವರೇ ಹೇಳಿದ್ದಾರೆ. ಅಡ್ಡ ವಾರಿಸು ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದಾರೆ, ಈ ಸಿನಿಮಾವನ್ನು ದ್ವಾರಕೀಶ್ ನಿರ್ಮಾಣ ಮಾಡಿದ್ದರು. 1983ರಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಆನಂತರ ನೀ ಬರೆದ ಕಾದಂಬರಿ, ಗುಂಗುವಾ ಸೇರಿದಂತೆ ಹಲವು ಚಿತ್ರಗಳಲ್ಲಿಇಬ್ಬರೂ ಕೆಲಸ ಮಾಡಿದ್ದಾರೆ. ಹಾಗೆ ಇವರ ಸ್ನೇಹವಿತ್ತು.
ಈ ಸ್ನೇಹಕ್ಕೆ ಕುರುಹು ಎನ್ನುವಂತೆ ತಮ್ಮಿಬ್ಬರ ಸ್ನೇಹವನ್ನು ರಜನಿಕಾಂತ್ ನೆನಪಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ರಜನಿ, ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೀಶ್ ಅವರ ನಿಧನ ನನಗೆ ಅತೀವ ನೋವನ್ನು ತಂದಿದೆ. ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ, ನಂತರ ದೊಡ್ಡ ನಿರ್ಮಾಪಕರು ಹಾಗೂ ನಿರ್ದೇಶಕರಾಗಿ ಬೆಳೆದರು ಹಾಗೂ ಬೆಳೆಸಿದರು. ಅವರ ಅಗಲಿಕೆ ನೋವು ತಂದಿದೆ. ಅವರಿಗೆ ಭಾವ ಪೂರ್ಣ ಸಂತಾಪ ಎಂದು ಬರೆದುಕೊಂಡಿದ್ದಾರೆ.