Breaking
Tue. Dec 24th, 2024

ವಾಣಿಜ್ಯ ಉದ್ದೇಶಗಳಿಗೆ ನೀರು ಮಾರಾಟ ಮಾಡುವುದನ್ನು ನಿಷೇಧ…!

ಚಿತ್ರದುರ್ಗ : ಜಿಲ್ಲೆಯಲ್ಲಿ ತೀವ್ರತರನಾದ ಬರಗಾಲ ಆವರಿಸಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕೊಳವೆಬಾವಿಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದು ಉತ್ತಮ ಪ್ರಥಮ ಆದ್ಯತೆಯಾಗಿದೆ.

ಖಾಸಗಿ ಕೊಳವೆಬಾವಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ, ನೀರು ಮಾರಾಟ ಮಾಡುವುದನ್ನು ಉದ್ದಿಮೆ ಮಾಡಿಕೊಂಡಿದ್ದಾರೆ. ಜಿಲ್ಲೆಯಾದ್ಯಂತ ಅವ್ಯವಹಾರವಾಗಿ ನೀರು ಮಾರಾಟ ಮಾಡುವ ಪ್ರಕರಣಗಳು ಇವೆ.

ವಾಣಿಜ್ಯ ಉದ್ದೇಶಗಳಿಗಾಗಿ ನೀರು ಮಾರಾಟ ಮಾಡುವುದನ್ನು ನಿಷೇಧಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದರ ಅನ್ವಯ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 30(1)ಅಡಿ, ಜಿಲ್ಲಾ ಖಾಸಗಿ ಕೊಳವೆ ಬಾವಿಗಳ ಮೂಲಕ ವಾಣಿಜ್ಯ ಉದ್ದೇಶಕ್ಕೆ ಕುಡಿಯುವ ನೀರು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಆದೇಶ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 (ಬಿ) ಮತ್ತು 57ರ ಅಡಿ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ. 

Related Post

Leave a Reply

Your email address will not be published. Required fields are marked *