Breaking
Tue. Dec 24th, 2024

ಬಿಜೆಪಿಯ ದುರಾಡಳಿತಕ್ಕೆ ಬೇಸತ್ತು ಮತದಾರರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿರ್ಧಾರ…!

ಚಿತ್ರದುರ್ಗ: ಏ.16 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಬೆಂಬಲಿಸಲು ಜಿಲ್ಲಾ ಗುತ್ತಿಗೆದಾರರ ಸಂಘ ನಿರ್ಣಯ ಕೈಗೊಂಡಿದೆ. ಜೋಗಿಮಟ್ಟಿ ರಸ್ತೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಆರ್.ಮಂಜುನಾಥ್ ನಿವಾಸದ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಕಾಂಟ್ರಾಕ್ಟರ್‌ಗಳ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಾಯಿತು. 

ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಸರಳ ಸಜ್ಜನ ರಾಜಕಾರಣಿ. 2014ರಲ್ಲಿ ಎಂಪಿ ಆಗಿರುವಾಗ ಯಾವುದೇ ಭ್ರಷ್ಟಾಚಾರದಲ್ಲಿ ಭಾಗವಹಿಸದೇ ಆಡಳಿತ ಮಂಡಳಿ. ಸಂಸದರ ಅನುದಾನ ಹಂಚಿಕೆ ವೇಳೆ ಯಾರೊಬ್ಬರಿಂದಲೂ ಕಮಿಷನ್ ಪಡೆಯಲು ಗುಣಮಟ್ಟ ಕಾಮಗಾರಿ ನಡೆಯಲು ಕಾರಣ. ಹೀಗಾಗಿ ಗುತ್ತಿಗೆದಾರರ ಸಂಘದ ವತಿಯಿಂದ ಸರ್ವಾನುಮತದಿಂದ ಅವರನ್ನು ಬೆಂಬಲಿಸಲು ನಿರ್ಣಯ ಕೈಗೊಳ್ಳಲಾಗಿದೆ. 

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಪಿಡಬ್ಲೂಡಿ, ಜಲಸಂಪನ್ ಮಂತ್ರಿಯಾಗಿದ್ದಾಗ ಗುತ್ತಿಗೆದಾರರ ಬಿಲ್ಲು ಲಂಚಕ್ಕೆ ಒತ್ತಾಯಿಸಿದ್ದರ ಬಗ್ಗೆ ವ್ಯಾಪಕ ಆರೋಪ ಕೇಳಿ ಬಂದಿತ್ತು. ಇಂತಹ ರಾಜಕಾರಣಿಗಳು ಮತ್ತು ಚಿತ್ರದುರ್ಗಕ್ಕೆ ಕಂಟಕ. ಕಾರಣಕ್ಕಾಗಿ ಸಂಸದರಾಗಿದ್ದ ಸಂದರ್ಭ ಭ್ರಷ್ಟರಹಿತ ಆಡಳಿತ ಚಂದ್ರಪ್ಪ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿ ಗುಣಮಟ್ಟದ ಕಾಮಗಾರಿ ಗುತ್ತಿಗೆದಾರರು ಕೈಗೊಳ್ಳಲು ಕಮಿಷನ್ ಪಡೆದ ಚಂದ್ರಪ್ಪ ಅವರಂತಹ ಜನಪ್ರತಿನಿಧಿಗಳು ಈ ಜಿಲ್ಲೆಯಲ್ಲಿನ ಗುತ್ತಿಗೆದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಜೊತೆಗೆ ಅವರ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. 

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ನಾನು ಸಮಾಜ ಕಲ್ಯಾಣ ಮಂತ್ರಿಯಾಗಿದ್ದಾಗ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ, ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಮಂತ್ರಿಯಾದ ಸಂದರ್ಭದಲ್ಲಿಯೂ 5 ಲಕ್ಷ ರೂ. ಸಬ್ಸಿಡಿ ಹಣವನ್ನು. 1 ಲಕ್ಷ ಸೀಮೀತಗೊಳಿಸಿ ಬಡವರ ಪಾಲಿಗೆ ಮಾರಕವಾದರು. ಎಸ್.ಸಿ.ಎಸ್.ಪಿ, ಟಿಎಸ್ಪಿ ಹಣವನ್ನು ಸಾಮಾನ್ಯ ಖಾತೆಗೆ ವರ್ಗಾಯಿಸಿ ಜನಸಾಮಾನ್ಯರ ಕಲ್ಯಾಣಕ್ಕೆ ಅಡ್ಡಿಪಡಿಸಿದರು ಎಂದು ಆರೋಪಿಸಿದರು. 

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಬಡವರು ಬಡವರಾಗಿಯೇ ಉಳಿದಿದ್ದಾರೆ. ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ದಿನನಿತ್ಯದ ಬಳಕೆಯ ಡೀಸೆಲ್, ಪೆಟ್ರೋಲ್, ಗ್ಯಾಸ್, ಆಹಾರ ವಸ್ತುಗಳ ಬೆಲೆ ಏರುತ್ತಿದೆ. ಇದರಿಂದ ಬಡವರು ಬದುಕುವುದೇ ಕಷ್ಟವಾಗಿದೆ. ಸರ್ಕಾರ ಕೊಟ್ಟ ಭರವಸೆಗಳಲ್ಲಿ ಇದುವರೆಗೂ ಒಂದನ್ನೂ ಕೇಂದ್ರಿಸಿಲ್ಲ ಎಂದು ಆರೋಪಿಸಿದರು. 

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದುರಾಡಳಿತಕ್ಕೆ ಬೇಸತ್ತು ಮತದಾರರು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದರು. ಅದೇ ಫಲಿತಾಂಶ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರ್ಗತಿಕರ, ಬಡವರ, ಶೋಷಿತರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ, ಬಿಜೆಪಿ ಪಕ್ಷವು ಅವುಗಳೆಲ್ಲವನ್ನು ಮೊಟಕುಗೊಳಿಸಿದೆ ಎಂದು ಆರೋಪಿಸಿದರು. 

ಪ್ರಸ್ತುತ ದಿನಮಾನಗಳಲ್ಲಿ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದೆ, ಸಂವಿಧಾನ ಉಳಿಯಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿದೆ. ಬಿಜೆಪಿ ನಾಯಕರು ಬಾಯಿ ಬಿಟ್ಟರೇ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಭಾಷಣ ಮಾಡುತ್ತಾರೆ. ಸಂವಿಧಾನವು ಇಡೀ ದೇಶದ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ರಚನೆಯಾಗಿದೆ. ಇದರಿಂದ ಎಲ್ಲರೂ ಸಮಾನವಾಗಿ ಬದುಕಲು ಅವಕಾಶ ಮಾಡಿಕೊಟ್ಟಿದೆ. ಇಂತಹ ಸಂವಿಧಾನವನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಬದಲಿಸುತ್ತೇವೆ ಎಂದು ಹೇಳುತ್ತಾರೆ. ಹೀಗಾಗಿ ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಬೇಕೆಂದರು.

ಬಿಜೆಪಿಯವರ ಸುಳ್ಳು ಭಾಷಣಗಳು, ನಾಟಕಗಳನ್ನು ಈಗ ಜನ ನಂಬುವುದಿಲ್ಲ. ನಾನು ಸಂಸತ್ ಸದಸ್ಯನಾದ ಸಂದರ್ಭದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದ ನೀಡದೇ ಆಡಳಿತ ನಡೆಸಿದೆ. ಹೀಗಾಗಿ ಯಾವ ಭಾಗಕ್ಕೂ ನಾನು ಹೋದ್ರೆ ಮನೆ ಮಗನಂತೆ ನನ್ನನ್ನು ಕಾಣುತ್ತಿದ್ದೇನೆ. ಗೆಲುವು ನಿಶ್ಚಿತವಾಗಿದೆ. 

ಜಿಪಂ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ನಗರಸಭೆ ನಾಮನಿರ್ದೇಶನ ಸದಸ್ಯ ಅಂಗಡಿ ರವಿಕುಮಾರ್, ನಗರಸಭೆ ಮಾಜಿ ಅಧ್ಯಕ್ಷರಾದ ಸಿ.ಟಿ.ಕೃಷ್ಣಮೂರ್ತಿ, ಎಚ್.ಮಂಜಪ್ಪ, ಮಾಜಿ ಉಪಾಧ್ಯಕ್ಷ ಕೆ.ಮಲ್ಲೇಶಪ್ಪ, ಜಿಲ್ಲಾ ಭೋವಿ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಹಿರಿಯೂರು ರಂಗಸ್ವಾಮಿ, ಕಾರ್ಯದರ್ಶಿ ಅಜಯ್‌, ಸಿದ್ದಪ್ಪ, ಮಲ್ಲೇಶ್‌, ಕಾಂಗ್ರೆಸ್‌ ಜಿಲ್ಲಾ ಗುತ್ತಿಗೆದಾರ ಎಂ.ಕೆ.ತಾಜಪೀರ್‌.

Related Post

Leave a Reply

Your email address will not be published. Required fields are marked *