ಚಿತ್ರದುರ್ಗ, ಏಪ್ರಿಲ್. 17 : ನಗರದ ಹನ್ನೆರಡನೆ ವಾರ್ಡ್ ಅಗಸನಕಲ್ಲು ಫಾತಿಮ ಮಸೀದಿ ಸಮೀಪ ಕೇಂದ್ರ ಸರ್ಕಾರದ ಗ್ಯಾರೆಂಟಿ ಕಾರ್ಡ್ಗಳನ್ನು ವಿತರಿಸಲಾಯಿತು.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್ ಮಹಿಳೆಯರಿಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಮಾತನಾಡುತ್ತ ಕಾಂಗ್ರೆಸ್ಗೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ಕೋಮುವಾದಿ ಬಿಜೆಪಿಯಲ್ಲಿ ಯಾರು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿಲ್ಲ. ಇಂದಿರಾಗಾಂಧಿ ರಾಜೀವ್ಗಾಂಧಿ ಇವರುಗಳು ದೇಶಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ. ನೆಹರು ಕುಟುಂಬದ ಕುಡಿ ರಾಹುಲ್ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.
ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ಐದು ಗ್ಯಾರೆಂಟಿಗಳನ್ನು ಜನತೆಗೆ ನೀಡಿದೆ. ಅದೇ ರೀತಿ ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರೆಂಟಿಗಳನ್ನು ನೀಡುವುದಾಗಿ ಘೋಷಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸರಳ, ಸಜ್ಜನ, ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸುವಂತೆ ಮಹಿಳೆಯರಲ್ಲಿ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಹನುಮಲಿ ಷಣ್ಮುಖಪ್ಪ, ಕೆಡಿಪಿ. ಸದಸ್ಯ ಕೆ.ಸಿ.ನಾಗರಾಜ್, ಪರಮೇಶ್ ಇವರುಗಳು ಕಾಂಗ್ರೆಸ್ ಸರ್ಕಾರದ ಸಾಧನೆಗಳ ಕುರಿತು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳನ್ನು ಮನೆ ಮನೆಗೆ ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಶ್ರಮಿಸುವಂತೆ ವಿನಂತಿಸಿದರು