ಚಿತ್ರದುರ್ಗ, ಏಪ್ರಿಲ್. 17 : ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಕಾರಣ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಗಾಯಗೊಂಡ 15 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹಿರಿಯೂರು ಮತ್ತು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.