ಕಾಂಗ್ರೆಸ್‍ನವರಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆಂಬ ವಿಶ್ವಾಸವಿಲ್ಲ ಎಂದು ಸಂತೋಷ್‍ ಜಿ ಲೇವಡಿ….!

ಚಿತ್ರದುರ್ಗ, ಏಪ್ರಿಲ್. 16 : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‌ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಇಡುವುದೇ ಪೀಕಲಾಟವಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಪೈಪೋಟಿಯಲ್ಲಿ ತೊಡಗಿದ್ದಾರೆ ಬಿಜೆಪಿ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಜಿ ಟೀಕಿಸಿದರು. ಉಮಾಪತಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಶಕ್ತಿ ಕೇಂದ್ರದ ಪ್ರಮುಖರ ಸಭೆ ಉದ್ಘಾಟಿಸಿ ಮಾತನಾಡಿದರು.

ರಾಹುಲ್‌ಗಾಂಧಿ ದೇಶದ ಪ್ರಧಾನಿಯಾಗುವುದು ಕಾಂಗ್ರೆಸ್‌ನವರಿಗೆ ಬೇಕಿಲ್ಲ. ಮೈಸೂರು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಕುಳಿತುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುತುವರ್ಜಿ ವಹಿಸಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಸಹೋದರ ಡಿ.ಕೆ.ಸುರೇಶ್‌ನನ್ನು ಗೆಲ್ಲಿಸಿಕೊಂಡು ಮರ್ಯಾದೆ ಉಳಿಸಿಕೊಳ್ಳಬೇಕೆಂಬ ದಿಕ್ಕಿನಲ್ಲಿ ಉಪ ಮುಖ್ಯಮಂತ್ರಿ ಡಿ..ಶಿವಕುಮಾರ್ ತಲೆ ಕೆಡಿಸಿಕೊಂಡಿದ್ದಾರೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಅಳಿಯನ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದಾರೆ. ಕಾಂಗ್ರೆಸ್‌ನವರಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆಂಬ ವಿಶ್ವಾಸವಿಲ್ಲ ಎಂದು ಲೇವಡಿ ಮಾಡಿದರು. 

ದೇಶದೆಲ್ಲೆಡೆ ನರೇಂದ್ರಮೋದಿ ನಾಯಕತ್ವವನ್ನು ಜನ ಬಯಸುತ್ತಿದ್ದಾರೆ. ನಾಲ್ಕು ನೂರು ಸೀಟು ಬಂದರೂ ಸಾಕು. 399 ಸ್ಥಾನ ಗೆದ್ದರೂ ಮೋದಿ ಪ್ರಧಾನಿಯಾಗುವುದು ಖಚಿತ. ಕಳೆದ ಮೂರು ತಿಂಗಳಿನಿಂದಲೂ ಬಿಜೆಪಿ. ಚುನಾವಣೆಗೆ ವ್ಯಾಪಕ ತಯಾರಿ ನಡೆಸುತ್ತಿದೆ. ಶಕ್ತಿ ಕೇಂದ್ರದ ಪ್ರಮುಖರು ಮನೆಗೆ ಹೋಗಿ ಪಕ್ಷದ ಸಾಧನೆಗಳನ್ನು ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಲೋಕಸಭೆಯನ್ನು ಕಳಿಸಿಕೊಡಿ ಎಂದು ವಿನಂತಿಸಿದರು.

ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವಲ್ಲಿ ಬಿಜೆಪಿ. ಹುಮ್ಮಸ್ಸಿನಿಂದ ಚುನಾವಣೆಗೆ ತಯಾರಾಗಿದೆ. ಈ ಚುನಾವಣೆಗೆ ವಿಶೇಷತೆಯಿದೆ. ಮತದಾನಕ್ಕೆ ಕೇವಲ ಒಂಬತ್ತು ದಿನಗಳ ಬಾಕಿ ಇರುವ ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಾಗಿದೆ. 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿ ನರೇಂದ್ರಮೋದಿ ಯಾವುದೇ ಕಳಂಕ, ಆಪಾದನೆ, ಭ್ರಷ್ಟಾಚಾರವಿಲ್ಲದೆ ಆಡಳಿತ ಮಂಡಳಿ. ಇಂತಹ ನಾಯಕನಿಗೆ ಮತ ನೀಡಲು ದೇಶದ 140 ಕೋಟಿ ಜನ ಹಾತೊರೆಯುತ್ತಿದ್ದಾರೆ. ಅರವತ್ತು ವರ್ಷಗಳ ಕಾಲ ಪ್ರಧಾನಿ ಅಧಿಕಾರ ನಡೆಸಿದ ಕಾಂಗ್ರೆಸ್‌ನಲ್ಲಿ ದೇಶವಾಗುವ ಯೋಗ್ಯತೆ ಯಾರಿಗೂ ಇಲ್ಲ. ಅನೇಕ ಹಗರಣಗಳಲ್ಲಿ ಸಿಕ್ಕಿಕೊಂಡು ಜೈಲಿಗೆ ಹೋಗಿ ಬಂದವರಿದ್ದಾರೆ. ಅನೇಕರು ಬೇಲ್ನಲ್ಲಿದ್ದಾರೆ. ಬಿಜೆಪಿ. ಅಭಿವೃದ್ದಿ ಕೆಲಸಗಳನ್ನು ಮನೆ ಮನೆಗೆ ತಿಳಿಸಿ ನನ್ನನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಕೋರಿದರು. 

ಕಾಂಗ್ರೆಸ್ ನಿಂದ ದೇಶದ ಅಭಿವೃದ್ದಿ ಸಾಧ್ಯವಿಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್. ಬಿಜೆಪಿ. ದೈತ್ಯ ಶಕ್ತಿಗಳು ಒಂದಾಗಿವೆ. ನಮ್ಮನ್ನು ಎದುರಿಸುವ ಶಕ್ತಿ ಸಾಮಥ್ರ್ಯ ಕಾಂಗ್ರೆಸ್‌ಗಿಲ್ಲ. ಅಭಿವೃದ್ದಿಯಲ್ಲಿ ಹಿಂದುಳಿದಿರುವ ಚಿತ್ರದುರ್ಗ ಜಿಲ್ಲೆಯನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದು ನನ್ನ ಗುರಿ ಎಂದು ಹೇಳಿದರು. 

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡುತ್ತ ಪಕ್ಷ ದೇಶಕ್ಕೆ ನರೇಂದ್ರಮೋದಿ ಬಲವಾಗಿದ್ದಾರೆ. ಅರವತ್ತು ವರ್ಷಗಳ ಕಾಂಗ್ರೆಸ್‌ನಿಂದ ಆಗದ ಅಭಿವೃದ್ದಿಯನ್ನು ಕೇವಲ ಹತ್ತು ವರ್ಷಗಳಲ್ಲಿ ಸಾಧಿಸಿರುವ ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಬೇಕೆಂದು ಜನ ಹಂಬಲಿಸುತ್ತಿದ್ದಾರೆ. ವಿಮಾನ ನಿಲ್ದಾಣ ಆಸ್ಪತ್ರೆ ಇನ್ನು ಹಲವಾರು ಯೋಜನೆಗಳನ್ನು ಹೊಂದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದಾದರೂ ದೇಶಗಳ ನಡುವೆ ಯುದ್ದ ನಡೆದರೆ ಸಂಧಾನ ಮಾಡಲು ಬೇರೆ ದೇಶಗಳು ನರೇಂದ್ರಮೋದಿಯ ಸಹಾಯ ಬಯಸುತ್ತಿರುವುದು ಭಾರತದ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಗುಣಗಾನ ಮಾಡಿದರು. 

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ ಬಿಜೆಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ಜಿ ಅತ್ಯುತ್ತಮ ಸಂಘಟನಾ ಚತುರರು. ಹತ್ತು ವರ್ಷಗಳ ಕಾಲ ದೇಶವನ್ನು ಮನ್ನಡೆಸಿಕೊಂಡು ಹೋದ ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕೆಂದರೆ ಈ ಬಾರಿಯ ಲೋಕಸಭೆ ಚುನಾವಣೆಗೆ ಮಹತ್ವವಿದೆ. ಆದ್ದರಿಂದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿಕೊಳ್ಳುವಂತೆ ಹೇಳಿದರು. 

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ತಿಪ್ಪೇಸ್ವಾಮಿ, ಎಂ.ಎಲ್.ಸಿ.ಚಿದಾನಂದಗೌಡ, ಎಸ್.ಲಿಂಗಮೂರ್ತಿ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಸಂಪತ್‌ಕುಮಾರ್, ಸುರೇಶ್‌ಸಿದ್ದಾಪುರ, ನವೀನ್ ಚಾಲುಕ್ಯ, ಬಾಳೆಕಾಯಿ ರಾಂದಾಸ್ ಮೊದಲಾದವರು ವೇದಿಕೆಯಲ್ಲಿದ್ದರು.

Related Post

Leave a Reply

Your email address will not be published. Required fields are marked *