ಚಿತ್ರದುರ್ಗ, ಏಪ್ರಿಲ್. 17 : ರಾಮನವಮಿ ಅಂಗವಾಗಿ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು.ದೇಶದ ಹಲವು ರಾಮ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ. ಈಗಿನ ಅಯೋಧ್ಯೆಯಲ್ಲಿ, ತಮಿಳುನಾಡಿನ ರಾಮೇಶ್ವರಂನಲ್ಲಿ ರಾಮನ ಪೂಜೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕರ್ನಾಟಕದಲ್ಲೂ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಕಛೇರಿಗಳನ್ನು ಆಯೋಜಿಸಲಾಗುತ್ತದೆ. ಕಾರ್ಯಕ್ರಮಗಳ್ಲಿ ಕರ್ನಾಟಕ ಹಾಗೂ ಇತರೆ ರಾಜ್ಯಗಳಿಂದ ಸಂಗೀತ ವಿದ್ವಾಂಸರು ಪಾಲ್ಗೊಳ್ಳುತ್ತಾರೆ.
ಹಬ್ಬದ ದಿನದಂದು ಪ್ರತೀಯೊಬ್ಬರೂ ಜಾತಿ, ಧರ್ಮವೆಂಬ ಕಟ್ಟಳೆಗಳನ್ನ ಬದಿಗೊತ್ತಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕ ಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ. ವಸುದೈವ ಕುಟುಂಬಕಂ ಅಂದರೆ ಇಡೀ ವಿಶ್ವವೇ ಒಂದು ಕುಟುಂಬ ಎಂಬುದನ್ನು ಜಗತ್ತಿಗೆ ಸಾರಿ ಹೇಳಲು ಇಂತಹ ಹಬ್ಬಗಳು ಮಹತ್ವಪೂರ್ಣವಾಗಿವೆ.
ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದ ಮುಂಭಾಗ ರಾಮ ಸೀತೆಯ ಫೋಟೋ ಇರಿಸಿ ಶ್ರದ್ದಾಭಕ್ತಿಯಿಂದ ಪೂಜಿಸಿ ನೂರಾರು ಭಕ್ತರಿಗೆ ಕೋಸಂಬರಿ ಪಾನಕ ವಿತರಿಸಲಾಯಿತು. ರಾಮ ಮನೆದೇವರು ಇರುವವರು ಹಬ್ಬವನ್ನು 9 ದಿನಗಳ ಕಾಲ ಆಚರಣೆ ಮಾಡುತ್ತಾರೆ. ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. ಹೀಗೆ 9 ದಿನದ ರಾಮನ ಉತ್ಸವ ಆಚರಿಸಲಾಗುತ್ತದೆ.
ರಂಗಯ್ಯನಬಾಗಿಲು ಸಮೀಪವಿರುವ ರಾಮನ ದೇವಸ್ಥಾನ ಹಾಗೂ ಶ್ರೀರಾಮನ ಪರಮಭಂಟ ಆಂಜನೇಯನ ದೇವಸ್ಥಾನಗಳಲ್ಲಿಯೂ ವಿಶೇಷವಾಗಿ ಪೂಜಿಸಲಾಯಿತು.
ಬನ್ನಿಮಹಾಕಾಳಮ್ಮ, ಆನೆ ಬಾಗಿಲು ಸಮೀಪವಿರುವ ಆಂಜನೇಯಸ್ವಾಮಿ ಹಾಗೂ ಅಂಭಾ ಭವಾನಿ ದೇವಸ್ಥಾನದಲ್ಲಿ ಶ್ರೀರಾಮ ಸೀತಾಮಾತೆಯನ್ನು ಪೂಜಿಸಲಾಯಿತು. ಬಹುತೇಕ ದೇವಾಲಯಗಳಲ್ಲಿ ಕೋಸಂಬರಿ ಪಾನಕ ಹಂಚಲಾಯಿತು. ರಾಮನವಮಿ ಆಚರಣೆ ಅತ್ಯಂತ ಸರಳವಾಗಿದೆ. ಸಾಮಾನ್ಯವಾಗಿ ರಾಮ ಪಟ್ಟಾಭಿಷೇಖ, ರಾಮ ಪಂಚಾಯತನದ ಪಟವನ್ನು ಇಟ್ಟು ಪೂಜೆ ಮಾಡುತ್ತಾರೆ, ಇದರಲ್ಲಿ ಶ್ರೀರಾಮನ ಜೊತೆದೆ ಎಲ್ಲಾ ಸಹೋದರರು ಇರುತ್ತಾರೆ. ಶ್ರೀರಾಮಚಂದ್ರನಿಗೆ ಷೋಡಶೋಪಚಾರದಿಂದ ಪೂಜೆ ಮಾಡಬೇಕು. ಪಾನಕ ಕೋಸಂಬರಿಗಳನ್ನು ನೈವೇದ್ಯ ಮಾಡಿ ಇತರರಿಗೆ ಹಂಚಲಾಗುತ್ತದೆ. ರಾಮನ ಭಜನೆ, ಹಾಡುಗಳಿಂದ ರಾಮನ ಧ್ಯಾನ ಮಾಡುತ್ತಾರೆ. ಮತ್ತೊಂದು ವಿಶೇಷವೆಂದರೆ, ರಾಮನಾಮ ಬರೆಯುವುದು. ರಾಮನಾಮ ಜಪಿಸಿದರೆ ರಾಮ ನಮ್ಮನ್ನು ಸಂರಕ್ಷಿಸುತ್ತಾನೆಂಬ ನಂಬಿಕೆ ಇದೆ.
ಕಣಿವೆ ಮಾರಮ್ಮ ಸೇವಾ ಸಮಿತಿ ವತಿಯಿಂದ ಆರ್ ಮೂರ್ತಿ ಜಿಲ್ಲಾಧ್ಯಕ್ಷರು, ಚಿತ್ರದುರ್ಗ ಜಿಲ್ಲಾ ಉಪ್ಪಾರ ಸಂಘ ತಿಪ್ಪೇಸ್ವಾಮಿ ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ಸಿದ್ದೇಶ್ವರ ಗಾದ್ರಿಲಂಗಪ್ಪ, ನಿಜಲಿಂಗಪ್ಪ, ಪರಮೇಶ್, ಪುನೀತ್, ಮಂಜು ಪೂಜಾರಿ ರಂಗಸ್ವಾಮಿ, ಲತಾ, ಲಕ್ಷ್ಮೀದೇವಿ, ಬಸಮ್ಮ, ನಾಗಭೂಷಣ ಮತ್ತು ಸಾರ್ವಜನಿಕರ ಭಕ್ತರು ಭಾಗವಹಿಸಿದ್ದರು.