Breaking
Wed. Dec 25th, 2024

ಬೆಳಗಾವಿ ಜನರ‌ ಕಷ್ಟ ಸುಖಗಳ ಬಗ್ಗೆ ಅರಿತಿರುವ ಅಭ್ಯರ್ಥಿಯನ್ನು ಬೆಂಬಲಿಸಿ…!

ಬೆಳಗಾವಿ : ವೇಗವಾಗಿ ಬೆಳೆಯುತ್ತಿರುವ ಬೆಳಗಾವಿ ನಗರಕ್ಕೆ ಅಷ್ಟೇ ವೇಗವಾಗಿ ಕೆಲಸ ನಿರ್ವಹಿಸುವ ಸಂಸದ ಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದರು. 

ಕರ್ನಾಟಕ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಪ್ರಮಾಣಿಕವಾಗಿ ತಲುಪಿಸಲಾಗುತ್ತಿದೆ. ಸುಮಾರು 1.20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪುತ್ತಿದೆ. ಇದು ವಿಶ್ವದಲ್ಲಿಯೇ ಮಾದರಿಯಾದ ಯೋಜನೆ. ಸರ್ವರನ್ನು ಬಸವಣ್ಣನವರ ಸಮಾನತೆಯ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಜಾರಿಗೆ ತಂದ ಯೋಜನೆ ಇದಾಗಿದೆ ಎಂದು ಸಚಿವರು ಹೇಳಿದರು.

ಮನೆಯಲ್ಲಿ ಕೂರದೆ ಎಲ್ಲರೂ ಮತದಾನ ಮಾಡಿ, ಬೆಳಗಾವಿ ಸ್ವಾಭಿಮಾನ ಉಳಿಸೋಣ. ಬೆಳಗಾವಿ ಜನರ ಕಷ್ಟ ಸುಖಗಳ ಬಗ್ಗೆ ಅರಿತಿರುವ ಅಭ್ಯರ್ಥಿಯನ್ನು ಬೆಂಬಲಿಸೋಣ. ಬದ್ದತೆ ಇಲ್ಲದ ಬಿಜೆಪಿ ಅಭ್ಯರ್ಥಿ ಕಣದಲ್ಲಿದ್ದು, ಅವರಲ್ಲಿ ಸಾಕಷ್ಟು ಗೊಂದಲವಿದೆ. ಪಕ್ಷಾತೀತವಾಗಿ ಎಲ್ಲರೂ ಮೃಣಾಲ್ ಬೆಂಬಲಿಸಿ ಎಂದು ಸಚಿವರು ಹೇಳಿದರು. ಬೆಳಗಾವಿ ಇನ್ನೂ ಬೆಳೆಯಬೇಕು. ಮೆಟ್ರೋ, ಎಫ್‌ಕೈಓವರ್, ಕೈಗಾರಿಕೆಗಳು ಬರಬೇಕು ಎಂದು ಹೇಳಿದರು.  

ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಮುಖ್ಯಮಂತ್ರಿ ಆಗಿ ಎರಡು ಬಾರಿ ಉಸ್ತುವಾರಿ ಸಚಿವರಾಗಿ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದರೂ ಅಭಿವೃದ್ಧಿ ಬಗ್ಗೆ ಚಿಂತಿಸದೆ ನಿರ್ಲಕ್ಷ್ಯ ವಹಿಸಿದರು. ಶೆಟ್ಟರ್ ಅವರಿಗೆ ಅಭಿವೃದ್ಧಿ ಮಾಡೋಕೆ ಬರಲ್ಲ. ಬಿಜೆಪಿ ಅಭ್ಯರ್ಥಿಗೆ ಇಲ್ಲಿ ಮತ ಕೇಳಲು ನೈತಿಕತೆ ಇದೆಯೇ? ಎಂದು ಪ್ರಶ್ನಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಜಗದೀಶ್ ಶೆಟ್ಟರ್ ಬೆಳಗಾವಿಗೆ ಸಾಕಷ್ಟು ಅನ್ಯಾಯ ಮಾಡಿದ್ದಾರೆ. ಅವರು ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಾನೂ ಭಾಗವಹಿಸಿದ್ದೆ. ಆಗ ಅವರ ಲಕ್ಷ್ಯ ಕೇವಲ ಹುಬ್ಬಳ್ಳಿ -ಧಾರವಾಡದ ಮೇಲಿತ್ತು. ನಾನು ಬೆಳಗಾವಿ ಬಗ್ಗೆ ಹೇಳಲು ಹೋದರೆ ನನ್ನ ಮೇಲೆ ಕೋಪಿಸಿಕೊಂಡರು. ಬೆಳಗಾವಿಗೆ ಏನೇ ಬಂದರೂ ಅಡ್ಡಗಾಲು ಹಾಕುವ ಚಾಲಿ ಅವರದ್ದಾಗಿತ್ತು. ಈಗ ಬೆಳಗಾವಿ ನನ್ನ ಕರ್ಮ ಭೂಮಿ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.

ಶಾಸಕ ಫಿರೋಜ್ ಸೇಠ್ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪುತ್ರ ಮೃಣಾಲ ಕೂಡ ಅವರದೇ ಮಾದರಿಯಲ್ಲಿ ಕೆಲಸ ಮಾಡಲಿದ್ದಾನೆ. ನಮಗೆಲ್ಲ ನಮಗೆ ಹೆಚ್ಚಿನ ಮತ ನೀಡಿ ಆಯ್ಕೆ ಮಾಡೋಣ. ಎಲ್ಲರೂ ಸೇರಿ ಬೆಳಗಾವಿಯನ್ನು ತೋರಿಸೋಣ ಎಂದರು.

ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್, ಆಮ್ ಆದ್ಮಿ ಪಕ್ಷದ ಗಿರೀಶ್ ಬಾಳೆಕುಂದ್ರಿ, ದಿನೇಶ ಬಾಳೆಕುಂದ್ರಿ, ಆರ್.ಪಿ.ಪಾಟೀಲ್ ಮೊದಲಾದವರು. ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಮಾಜಿ ಸಚಿವ ಶಶಿಕಾಂತ್ ನಾಯಕ್, ಬೆಳಗಾವಿ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ಎಸ್.ಎಸ್.ಕಿವುಡಸಣ್ಣನವರ, ಮಾಜಿ ಮೇಯರ್ ಎನ್.ಬಿ.ನಿರ್ವಾಣಿ, ಮಾಜಿ ಉಪ ಮೇಯರ್ ಜ್ಯೋತಿ ಭಾವಿಕಟ್ಟಿ, ಮಾಜಿ ಕಾರ್ಪೋರೇಟರ್ ಅನುಶ್ರೀಪಾಂಡೆ, ಪುಷ್ಪ ಪರ್ವತರಾವ್ ಸೇರಿದಂತೆ ಹಲವು ಮಂದಿ ಸೇರಿದ್ದಾರೆ.

Related Post

Leave a Reply

Your email address will not be published. Required fields are marked *