ಉಡುಪಿ : ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಪಿ.ಯಶೋಧಾ ನಾರಾಯಣ ಉಪಾಧ್ಯ (83) ಹಿರಿಯ ಮಹಿಳೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಸಾಸ್ತಾನ ಪಾಂಡೇಶ್ವರ ನಿವಾಸಿಯಾಗಿರುವ ಯಶೋಧಾ, ಚಡಗರ ಅಗ್ರಹಾರದ ನಿವಾಸಿಯಾಗಿದ್ದಾರೆ. ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿರುವ ಅವರು, ತನ್ನ ಜೀವನದಲ್ಲಿ ಎಲ್ಲಾ ಚುನಾವಣೆಗಳಲ್ಲಿ ತಪ್ಪದೆ ಹಕ್ಕು ಚಲಾಯಿಸಿದ್ದಾರೆ.
ಈ ಬಾರಿ ಹಿರಿಯ ನಾಗರಿಕರ ಕಾರ್ಯಕ್ರಮದ ಮನೆಯಿಂದಲೇ ಮತದಾನ ಮಾಡಿದರು. ಬೆಳಗ್ಗೆಯಿಂದ ಕೊಂಚ ಎದೆನೋವು ಇತ್ತು ಎಂದು ಮನೆಯವರ ಬಳಿ ಹೇಳಿಕೊಂಡಿದ್ದರು. ಆದರೆ ಮತದಾನ ಮಾಡಿ ಆಸ್ಪತ್ರೆಗೆ ತೆರಳಿದ್ದ ಮಹಿಳೆ ಯಶೋಧಾ ಅವರನ್ನು ಮತ ಪ್ರಕ್ರಿಯೆ ಮುಗಿದ ಮೇಲೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸಿದೆ ಯಶೋಧಮ್ಮ ಕೊನೆಯ ಸಿರೆಳೆದಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಚುನಾವಣಾ ಪ್ರಕ್ರಿಯೆ ತನ್ಮಯ ಹಕ್ಕು ಚಲಾಯಿಸಬೇಕೆಂಬ ಆಸೆಯನ್ನು ಪೂರ್ತಿಗೊಳಿಸಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ.