ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ.
ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಮಂಜುನಾಥ್ ಕಣಿವೆ ತಿರುವಿನ ಬಳಿ ಕಾರಿನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಇನ್ನಿಬ್ಬರು ಇದ್ದಾರೆ.
ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದರು.