ಚಿತ್ರದುರ್ಗ. ಏ.21: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನ ದಿನ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26 ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಹೋಟೆಲ್, ಕ್ಲಬ್ ಹಾಗೂ ಶೇಂದಿ, ಬಾರ್ ಅಂಡ್ ರೆಸ್ಟೋರೆಂಟ್, ಮತ್ತು ಡಾಬಾ ಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮದ್ಯ ಮಾರಾಟ ಮಾಡುವಂತಿಲ್ಲ. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.