ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್ ಅನ್ನು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮಂಗಳವಾರ ಪರಿಶೀಲನೆ ನಡೆಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಮಂಗಳವಾರ ಮಧ್ಯಾಹ್ನ 3.25ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಚಿತ್ರದುರ್ಗ ನಗರದ ಎಂ.ಕೆ.ಹಟ್ಟಿಯ ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲಾ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಿದರು.
ಈ ವೇಳೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು ಸೇರಿದಂತೆ ಎಫ್‍ಎಸ್‍ಟಿ ತಂಡದ ಅಧಿಕಾರಿಗಳು ಇದ್ದರು.