ಚಿತ್ರದುರ್ಗ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಂಯುಕ್ತಾಶ್ರಯದಲ್ಲಿ ಮದ್ಯಮುಕ್ತ ಚುನಾವಣೆ ನಿಮಿತ್ತ ರುಡ್ಸೆಟ್ನಲ್ಲಿ ಕರಪತ್ರ ಬಿಡುಗಡೆ ಮಾಡಲಾಯಿತು.
ಜಿಲ್ಲಾ ಜನಜಾಗೃತಿ ಸದಸ್ಯ ನಾಗರಾಜ್ ಸಂಗಮ್ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು. ಯಾರೂ ಮತದಾನದಿಂದ ದೂರ ಉಳಿಯಬಾರದು. ಚುನಾವಣೆಯಲ್ಲಿ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ಹೇಳಿದರು.
ರುಡ್‌ಸೆಟ್ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ರಾಧಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಕಿರಣ್ ಶಂಕರ್, ಶಾಂತ ಅಶೋಕ್, ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ರವಿಚಂದ್ರ, ನವಜೀವನ ಸಮಿತಿಯ ಸದಸ್ಯರು ಭಾಗವಹಿಸಿದ್ದರು.