Breaking
Wed. Dec 25th, 2024

ಗುಡುಗು ಮತ್ತು ಸಿಡಿಲು ಅಪಘಾತದಿಂದ ಪಾರಾಗಲು ಸಲಹೆಗಳು…!

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿದ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಸಾರ್ವಜನಿಕ ಇಲಾಖೆ (ವಿಪತ್ತು ನಿರ್ವಹಣೆ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ನಿಯಮಾವಳಿಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್. 

ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಗುಡುಗು ಮತ್ತು ಸಿಡಿಲು ಸಂದಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು: ಹೊರಗೆ ಹೋಗುವ ಅನಿವಾರ್ಯತೆಯಲ್ಲಿ ಹವಾಮಾನ ಮುನ್ಸೂಚನೆ ಮತ್ತು ಮುನ್ನೆಚ್ಚರಿಕೆಗಳ ಕಾಮನ್ ಅಲಟಿರಿಂಗ್ ಪ್ರೋಟೋಕಾಲ್ (ಸಿ.ಎ.ಪಿ.) ಮುಖಾಂತರ ಬರುವ ಮೆಸೇಜ್‌ಗಳನ್ನು ಮೊಬೈಲ್‌ನಲ್ಲಿ ಗಮನಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಮತ್ತು ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು. 

ಗುಡುಗು, ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯಬೇಕು. ನೀರಿನ ಮೂಲ ಕೆರೆಗಳು ಮತ್ತು ನದಿಗಳಿಂದ ದೂರವಿರಬೇಕು.

ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು. 

ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಯಾವುದೇ ಅವಶೇಷಗಳನ್ನು ತೆಗೆದುಹಾಕಬೇಕು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆಯನ್ನು ಸೂಚಿಸುತ್ತದೆ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು.

ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು, ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈ ಸಮಯದಲ್ಲಿ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು.

ಅರಣ್ಯ, ಪುದೇಶದಿಂದ ಗಿಡ-ಗಡ್ಡೆಗಳಿಲ್ಲದ ಪ್ರದೇಶದ ಕಡೆಗೆ ಚಲಿಸಬೇಕು ಹಾಗೂ ಮಿಂಚಿನ ಹೊಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿದೆ. ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣಗಳಿಂದ ದೂರವಿರುವುದು. ಬಾಗಿಲುಗಳು, ಕಿಟಕಿಗಳು, ಮಂಟಪಗಳು, ಕಾಂಕ್ರಿಟ್ ನೆಲ, ಬೆಂಕಿಯ ಸ್ಥಳಗಳು, ಸ್ಟವ್ಗಳು, ಬಾತ್ತಬ್‌ಗಳು ಅಥವಾ ಇತರ ವಿದ್ಯುತ್ ಉಪಕರಣಗಳಿಂದ ದೂರವಿರುವುದು. 

ಸಿಡಿಲು, ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನ: ಸಿಡಿಲು, ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112/108 ಸಹಾಯವಾಣಿಗೆ ಕರೆ ಮಾಡಬೇಕು. ವೈದ್ಯಕೀಯ ಸಿಬ್ಬಂದಿಯು ಆಗಮಿಸುವ ಮುನ್ನವೇ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು, ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಲಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದ ಯಾವುದೇ ವಿದ್ಯುತ್ ಕಣ್ಣುಗಳು ಸಂಚಾರವಾಗುವುದಿಲ್ಲ.

ಆದ್ದರಿಂದ ಸಿಡಿಲಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿಲ್ಲ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಮತ್ತು ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು.

ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟವನ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತವು ಕಂಡು ಬರದಿದ್ದಲ್ಲಿ ತಕ್ಷಣವೇ ಹೃದಯ ಸಂಕೋಚನ ಮತ್ತು ಹೃದಯದ ಪುನರುಜ್ಜೀವನದ ಪ್ರಕ್ರಿಯೆಯು ಪ್ರಾರಂಭವಾಗಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ಕಣ್ಣಿನ ದೃಷ್ಟಿ, ಕಿವಿ ಕೇಳುವಿಕೆ ಹಾಗೂ ಮೂಲೆಗಳು ಮುರಿದಿವೆಯೇ ಎಂದು ಪರೀಕ್ಷಿಸಬೇಕು.

ಇದರಿಂದ ಪಾಶ್ರ್ವವಾಯು, ಲಕ್ವಾ ಹೊಡೆಯುವುದು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದು. ಸಿಡಿಲಿನ ಹೊಡೆತಕ್ಕೆ ಸಿಲುಕಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು. ಸಿಡಿಲಿನ ಹೊಡತಕ್ಕೆ ಒಳಗಾದ ಅಪಾಯಕಾರಿ ಸ್ಥಳದಲ್ಲಿದ್ದರೆ, ಅವನಿಗೆ ಸೂಕ್ತವಾದ ರಕ್ಷಣಾ ಸ್ಥಳಕ್ಕೆ ಸ್ಥಳಾಂತರಿಸಬೇಕು. 

ಸಿಡಿಲಿನ ಹೊಡತಕ್ಕೆ ಒಳಗಾದ ವಿವಿಧ ರೀತಿಯ ಸುಟ್ಟುಗಾಯಗಳಿಂದ ಬಳಲಬಹುದು ಹಾಗೂ ಗಾಯಗಳು, ಅಘಾತಕ್ಕೆ ಒಳಗಾಗಬಹುದು. ಅಂತಹ ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳು ಕಂಡುಬಂದರೆ ಸೂಕ್ತ ಚಿಕಿತ್ಸೆಗಾಗಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಕಳುಹಿಸಬೇಕು. ಸಿಡಿಲು ಬಡಿದಿರುವ ವ್ಯಕ್ತಿಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿದಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ನೀಡಲಾಗಿದೆ. ಮತ್ತು ಸಿಡಿಲಿನ ಹೊಡತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್.

Related Post

Leave a Reply

Your email address will not be published. Required fields are marked *