Breaking
Tue. Dec 24th, 2024

ಇವಿಎಂ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 33 ಮಂದಿಯ ಬಂಧನ…!

ಚಾಮರಾಜನಗರ, ಏಪ್ರಿಲ್ 27 : ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ.

ಘಟನೆ ಸಂಬಂಧ ಈವರೆಗೂ 33 ಮಂದಿಯನ್ನು ಬಂಧಿಸಿದ್ದೇವೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ಹೇಳಿದ್ದಾರೆ. ಅವರು ಮಾಧ್ಯಮದವರೊಂದಿಗೆ ಮಾತನಾಡಿದರು, ಇಂಡಿಗನತ್ತ ಗ್ರಾಮದಲ್ಲಿ ಒಂದು ಕೆಎಸ್ಆರ್ಪಿ ತುಕಡಿ, ಡಿಎಆರ್ ತುಕಡಿ ಯೋಜನೆ ಮಾಡುವ ಮೂಲಕ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ ಎಂದು ಹೇಳಿದರು. 

ಇನ್ನು ನಿನ್ನೆ ಗಲಾಟೆ ಗದ್ದಲವಾಗಿ ಇವಿಎಂ ಮಶಿನ್ ಧ್ವಂಸ ಮಾಡಿದ ಬೆನ್ನಲ್ಲೆ ಕೇಂದ್ರ ಚುನಾವಣಾ ಆಯೋಗಕ್ಕೆ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿ ವರದಿ ನೀಡಿತ್ತು. ವರದಿ ಹಾಗೂ ಎಫ್ಐಆರ್ ಕಾಪಿ ಸ್ವೀಕರಿಸಿದ ಕೇಂದ್ರ ಚುನಾವಣಾ ಆಯೋಗ ಸೋಮವಾರ ಮತದಾನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಸೂಕ್ತ ಭದ್ರತೆಯೊಂದಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಜತೆ ಮರು ಮತದಾನಕ್ಕೆ ಸಿದ್ದತೆ ನಡೆದಿದೆ.

ಮತದಾನದ ವೇಳೆ ನಡೆದಿದ್ದೇನು? ಮೂಲ ಸೌಕರ್ಯವನ್ನು ಕಲ್ಪಿಸಿದ ವಿಚಾರವಾಗಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿದ್ದರು. ಯಾರೊಬ್ಬರೂ ಮತದಾನಕ್ಕೆ ಬಾರದೆ ಮತದಾನವಾಗುವ ಆತಂಕ ಅಧಿಕಾರಿಗಳದ್ದಾಗಿತ್ತು. ಹೀಗಾಗಿ ಅಧಿಕಾರಿಗಳು ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಲು ಮುಂದಾಗಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ. 

ಈ ವೇಳೆ, ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮೇಜು, ಕುರ್ಚಿ, ಇವಿಎಂ ಧ್ವಂಸ ಮಾಡಿದ್ದರು.

Related Post

Leave a Reply

Your email address will not be published. Required fields are marked *