Breaking
Tue. Dec 24th, 2024

ಅಂಬುಲೆನ್ಸ್‌ವೊಂದು  ಮೂರು ಕಾರು ಮತ್ತು ಒಂದು ಬೈಕ್‌ಗೆ ಸರಣಿಯಾಗಿ ಡಿಕ್ಕಿ…!

ಬೆಂಗಳೂರು: ಅಂಬುಲೆನ್ಸ್‌ವೊಂದು  ಮೂರು ಕಾರು ಮತ್ತು ಒಂದು ಬೈಕ್‌ಗೆ ಸರಣಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.

ಶುಕ್ರವಾರ ರಾತ್ರಿ 10:45ರ ಸುಮಾರಿಗೆ ಸರಣಿ ಅಪಘಾತ ನಡೆದಿದೆ. ಅಂಬುಲೆನ್ಸ್ ಚಾಲಕ ಸುಮಂತ್ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಬರುತ್ತಿದ್ದ ಸಂದರ್ಭ ನಿಯಂತ್ರಣ ಸಿಗದೆ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಚಾಲಕ ಸುಮಂತ್‌ನನ್ನು ಬಂಧಿಸಿದ್ದಾರೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Post

Leave a Reply

Your email address will not be published. Required fields are marked *