ಬೆಳಗಾವಿ : ಪ್ರತಿ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣು ಮಕ್ಕಳ ತಾಳಿ, ಕೈ ಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ. ಆದ್ದರಿಂದ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಅಧಿಕಾರ ನೀಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಗವಾಡ ತಾಲ್ಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾಗವಾಡ, ಅಥಣಿ, ಕುಡಚಿ, ರಾಯಬಾಗ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ 2 ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಈ ಪ್ರಧಾನಿ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರು. ಮಾಡಬೇಕೆಂದು ಸಿಎಂ ಅವರಿಗೆ ಮನವಿ ಮಾಡಿದರು.
ಕುಡಚಿ ಶಾಸಕ ಮಹೇಂದ್ರ ತಮ್ಮನ್ನವರ್ ಮಾತನಾಡಿ, ಸ್ವಾತಂತ್ರ್ಯದ ನಂತರ 2014ರವರೆಗಿನ 67 ವರ್ಷಗಳಲ್ಲಿ ದೇಶದ ಒಟ್ಟು ಸಾಲವು 55 ಲಕ್ಷ ಕೋಟಿ ರೂ. ಇತ್ತು. ಆದರೆ, ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅದನ್ನು 205 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಿದೆ. ಈ ಮೂಲಕ ಮೋದಿ ಸರ್ಕಾರ ಸುಮಾರು 157 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ, ಮಾಜಿ ಸಚಿವರಾದ ವೀರಕುಮಾರ ಪಾಟೀಲ್, ಎ.ಬಿ.ಪಾಟೀಲ್, ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ, ಗಣೇಶ್ ಹುಕ್ಕೇರಿ, ಮಹೇಂದ್ರ ತಮ್ಮನ್ನವರ್, ಮಾಜಿ ಶಾಸಕರಾದ ಕಾಕಾ ಸಾಹೇಬ್ ಪಾಟೀಲ್, ಶ್ಯಾಮ್ ಘಾಟಗೆ, ಮೋಹನ್ ಶಾ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಚಿಕ್ಕೋಡಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನಿರ್ಮಲಾ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಸದಾಶಿವ ಬೂಟಾಳಿ, ಸಿದ್ಧಾರ್ಥ್ ಸಿಂಗೆ, ಶ್ಯಾಮ್ ಪೂಜಾರಿ, ದಿಗ್ವಿಜಯ ಪವಾರ್ ದೇಸಾಯಿ, ಅನಂತಕುಮಾರ ಬ್ಯಾಕೋಡ, ರಮೇಶ್ ಸಿಂದಗಿ, ಅರ್ಜುನ ನಾಯಕವಾಡಿ, ಸಂಜು ಬಾನೆ ಸರ್ಕಾರ, ಎನ್ ಸಿಪಿ ಮುಖಂಡ ಉತ್ತಮ ಪಾಟೀಲ್, ಅಶೋಕ ಮಗದುಮ್, ಮಹಾವೀರ ಮೋಹಿತೆ ಸೇರಿದಂತೆ ನೂರಾರು ಮುಖಂಡರು ವೇದಿಕೆ ಮೇಲಿದ್ದರು. ಅಪಾರ ಸಂಖ್ಯೆಯ ಸಾರ್ವಜನಿಕರು ಸೇರಿದ್ದರು.