ಬೆಂಗಳೂರು : ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತದಾನ ಮುಗಿದ ಬಳಿಕ ಜರ್ಮನಿಗೆ ತೆರಳಿದ್ದಾರೆ. ಲೋಕಸಭಾ ಚುನಾವಣಾ ಸಮಯದಲ್ಲಿ ಅಶ್ಲೀಲ ವಿಡಿಯೋ ಪ್ರಕರಣ ದೊಡ್ಡ ಸದ್ದು ಮಾಡುತ್ತಿರುವ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಶನಿವಾರ ಬೆಳಗ್ಗೆ 3:15ಕ್ಕೆ ಬೆಂಗಳೂರಿನಿಂದ ಜರ್ಮನಿಯ ಫ್ರಾಂಕ್ಫರ್ಟ್ಗೆ ತೆರಳಿ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲಾ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿರುವುದು, ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಸಂಬಂಧ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಪ್ರತಿಕ್ರಿಯಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ನಲ್ಲಿ ಬಯಸಿದ್ದಾರೆ.