ಚಿತ್ರದುರ್ಗ, ಏಪ್ರಿಲ್. 29 : ಮಹಿಳೆಯರ ಮೇಲಿನ ಕಿರುಕುಳದಲ್ಲಿ ಭಾಗವಹಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ಇವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆಯಿಂದ ಜಾತ್ಯಾತೀತ ಜನತಾದಳದ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಲಾಯಿತು.
ಮನವಿ ಸ್ವೀಕರಿಸಲು ಬಾರದ ಜೆಡಿಎಸ್.ಮುಖಂಡರುಗಳ ವಿರುದ್ಧವೂ ಧಿಕ್ಕಾರಗಳನ್ನು ಕೂಗಿದ ಪ್ರತಿಭಟನಾಕಾರರು ಮನವಿ ಪತ್ರವನ್ನು ಜೆಡಿಎಸ್ ಕಚೇರಿಯ ಗೋಡೆಗೆ ಅಂಟಿಸಿದರು.
ಎರಡು ಸಾವಿರಕ್ಕೂ ಹೆಚ್ಚು ಪ್ರಕರಣದಲ್ಲಿ ತೊಡಗಿರುವ ಪ್ರಜ್ವಲ್ ರೇವಣ್ಣ ಜರ್ಮನ್‌ಗೆ ಫಲಾಯನಗೊಂಡಿದ್ದು. ಕೂಡಲೇ ಅಲ್ಲಿಂದ ಬಂಧಿಸಿ ಕರೆತರಬೇಕು. ಜಾತ್ಯಾತೀತ ಜನತಾದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇವರುಗಳು ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಣ್ಣವನ್ನು ಬೆರೆಸಿದ ಕೂಡಲೇ ಪ್ರಜ್ವಲ್ ರೇವಣ್ಣ ಇವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್.ಐ.ಟಿ.ಗೆ ವಹಿಸಿದೆ. ಏನು ತಪ್ಪು ಮಾಡಿಲ್ಲವೆಂದ ಮೇಲೆ ಪ್ರಜ್ವಲ್‌ರೇವಣ್ಣ ಏಕೆ ಜರ್ಮನಿಗೆ ಪಲಾಯನ ತಲೆ ಮೆರೆಸಬೇಕು ಎಂದು ಪ್ರಶ್ನಿಸಿದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಹಗರಣವನ್ನು ಸರ್ಕಾರ ಕಾಮುಕರಿಗೆ ತಕ್ಕ ಶಿಕ್ಷೆ ವಿಧಿಸಿದೆ.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಗೋಪಿನಾಥ್, ಕಾರ್ಯದರ್ಶಿ ಅಣ್ಣಪ್ಪ, ಉಪಾಧ್ಯಕ್ಷೆ ರತ್ನಮ್ಮ, ಸಂಚಾಲಕ ಹರೀಶ್‌ಕುಮಾರ್, ನಗರಾಧ್ಯಕ್ಷ ಅವಿನಾಶ್, ಯುವ ಘಟಕದ ಅಧ್ಯಕ್ಷ ನಾಗರಾಜ್‌ಮುತ್ತು, ರಾಜಣ್ಣ, ಕಮಲಮ್ಮ, ಸುರೇಶ್, ನಿಸಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.