Breaking
Mon. Dec 23rd, 2024

ಜಿಲ್ಲಾ ವಕೀಲರ ಬಳಗದಿಂದ ವಕೀಲರ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ರವರ 133 ನೇ ಜಯಂತಿ…!

ಚಿತ್ರದುರ್ಗ, ಏಪ್ರಿಲ್. 29 : ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಬೋಧಿಸುವ ಧರ್ಮವನ್ನು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಇಷ್ಟ ಪಡುತ್ತಿದ್ದರು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಕೆ.ಬಿ.ಗೀತಾ ಹೇಳಿದರು. 

ಜಿಲ್ಲಾ ವಕೀಲರ ಬಳಗದಿಂದ ವಕೀಲರ ಭವನದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ 133 ನೇ ಜಯಂತಿ ಉದ್ಘಾಟಿಸಿದರು. ಆಳವಾದ ಅಧ್ಯಯನ ಮಾಡಿದ ಸಂವಿಧಾನ ಡಾ.ಬಿ.ಆರ್. ಅಂಬೇಡ್ಕರ್ ಕಷ್ಟ ಸಹಿಷ್ಣುವಾಗಿದ್ದರು. ಪ್ರಪಂಚ ಪರ್ಯಟನೆ ಮಾಡಿ ಭಾರತಕ್ಕೆ ಅತ್ಯಂತ ಶಕ್ತಿಶಾಲಿಯಾದ ಸಂವಿಧಾನವನ್ನು ರಚಿಸಿ ಕೊಡುಗೆಯಾಗಿ ನೀಡಿದೆ. ಆದ್ದರಿಂದ ಅವರೊಬ್ಬ ಕಾನೂನು ಪಿತಾಮಹ ಎಂದು ನಡೆಸಲಾಯಿತು. 

ಪ್ರತಿಯೊಬ್ಬರು ಜೀವನ ಉದ್ದೀಪನಗೊಳಿಸಿಕೊಳ್ಳಲು ಸನ್ಮಾರ್ಗದಲ್ಲಿ ನಡೆಯಬೇಕು ಎಂಬ ಆಶಯ ಅವರದ್ದಾಗಿತ್ತು. ಎಲ್ಲಾ ಜಾತಿ ಧರ್ಮದವರ ಸಮಾನತೆ. ಅದರಲ್ಲೂ ವಿಶೇಷವಾಗಿ ಮಹಿಳೆಯರ ಹಕ್ಕಿಗಾಗಿ ಸಾಕಷ್ಟು ಹೋರಾಟ ಏರ್ಪಡಿಸಲಾಗಿತ್ತು. ರಾಜಕೀಯ ಪ್ರಜಾಪ್ರಭುತ್ವದಲ್ಲಿ ಸಾಮಾಜಿಕ ಪ್ರಜಾಪ್ರಭುತ್ವವಿರಬೇಕೆಂಬುದು ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯವಾಗಿತ್ತು. ಕಾನೂನು ರಕ್ಷಣೆ ಮಾಡಬೇಕಾದರೆ ಕಾನೂನು ಮತ್ತು ಸುವ್ಯವಸ್ಥೆ ಇರಬೇಕು. ಆಗ ಮಾತ್ರ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯ.

ಹೋರಾಟದಿಂದ ಹಕ್ಕು ಪಡೆಯಬಹುದು ಸಂವಿಧಾನದ ಮೂಲ ಆಶಯ ಎಂದು ಹೇಳಿದರು. ಸಂವಿಧಾನದಲ್ಲಿ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ನೀಡಲಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರು ಶಿಕ್ಷಣವಂತರಾಗುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. 

ಒಂದನೇ ಜಿಲ್ಲಾ ಸತ್ರ ನ್ಯಾಯಾಧೀಶರಾದ ನಿಂಬಣ್ಣ ಶಂಕರಪ್ಪ ಕಲ್ಕಣಿ ಮಾತನಾಡಿ ಶಿಕ್ಷಣ, ಸಂಘಟನೆ, ಹೋರಾಟ ಸಂವಿಧಾನ ನೀಡಿರುವ ಮೂಲ ಹಕ್ಕು, ದೇಶಕ್ಕೆ ಸಂವಿಧಾನ ನೀಡಿರುವ ಡಾ.ಬಿ.ಆರ್. ಜನಸಾಮಾನ್ಯರ ಹಕ್ಕುಗಳ ರಕ್ಷಣೆಗೆ ಹೊಸ ಹೊಸ ಕಾನೂನುಗಳನ್ನು ಜಾರಿಗೆ ತಂದರು. ದೇವಾಲಯದ ಶಾಲೆಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂಬುದು ಅಂಬೇಡ್ಕರ್‌ರವರ ಚಿಂತನೆಯಾಗಿತ್ತು. ಬಾಲ್ಯದಿಂದಲೂ ಜೀವನದಲ್ಲಿ ಅನೇಕ ವಿರೋಧಗಳನ್ನು ಎದುರಿಸಿದ ಡಾ.ಬಿ.ಆರ್. 

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಚಿಕ್ಕಂದಿನಿಂದಲೂ ಹಸಿವು, ನೋವು, ಅವಮಾನ, ದೌರ್ಜನ್ಯಗಳನ್ನು ಅನುಭವಿಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನೆ ಸಾಧ್ಯವಾಯಿತು. ಜ್ಞಾನ, ಶಿಕ್ಷಣದ ಹಸಿವಿತ್ತು. ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ತಿಳಿದುಕೊಳ್ಳಬೇಕಾದರೆ ಪ್ರತಿಯೊಬ್ಬರು ಸಂವಿಧಾನವನ್ನು ಓದಬೇಕು ಎಂದು ನುಡಿದರು.

ನ್ಯಾಯವಾದಿ ಬೀಸನಳ್ಳಿ ಜಯಣ್ಣ ಮಾತನಾಡುತ್ತ ವಕೀಲರ ಬಳಗದಿಂದ ಕಳೆದ ಹತ್ತು ವರ್ಷಗಳಿಂದ ಡಾ.ಬಿ.ಆರ್. ಅಂಬೇಡ್ಕರ್‌ರವರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಕೇವಲ ದಲಿತರಿಗಷ್ಟೇ ಅಲ್ಲ. ಎಲ್ಲಾ ಜಾತಿ ಧರ್ಮದವರಿಗೂ ಸಮಾನತೆ ಸಿಗಬೇಕೆನ್ನುವುದು ಅವರ ಉದ್ದೇಶವಾಗಿತ್ತು. ಶಿಕ್ಷಣ, ಸಂಘಟನೆ, ಹೋರಾಟ ಅವರ ಮೂಲ ಮಂತ್ರವಾಗಿತ್ತು. ಕಬೀರದಾಸರ ಚಿಂತನೆ ಮೈಗೂಡಿಸಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ಪಾಸ್ ಆಗಲಿಲ್ಲವೆಂದು ಸ್ಥಾನಕ್ಕೆ ರಾಜಿನಾಮ ನೀಡಿ ಹೊರ ಬಂದರು. ಅಧಿಕಾರದ ಹಿಂದೆ ಎಂದಿಗೂ ಹೋಗಲಿಲ್ಲ. ಶ್ರೇಷ್ಟ ವ್ಯಕ್ತಿತ್ವ ಅವರದ್ದಾಗಿತ್ತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ, ಒಂದನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎ.ಎಂ.ಚೈತ್ರ, ನೇಮಿಚಂದ್, ಎರಡನೇ ಅಪರ ಸಿವಿಲ್ ನ್ಯಾಯಾಧೀಶರಾದ ಅನಿತಾಕುಮಾರ್, ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಅನಿಲ್‌ಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಜಂಟಿ ಕಾರ್ಯದರ್ಶಿ ಗಿರೀಶ್ ಪ್ರಧಾನ ಮಲ್ಲಾಪುರ, ಖಜಾಂಚಿ ಪ್ರದೀಪ್‌ಕುಮಾರ್, ವಕೀಲರು ಸಂಘದ ಮಾಜಿ ಅಧ್ಯಕ್ಷ ವಿಜಯಕುಮಾರ್ ವೇದಿಕೆಯಲ್ಲಿದ್ದರು. 

ಎಸ್.ವಿಜಯಕುಮಾರ್ ಪ್ರಾರ್ಥಿಸಿದರು, ಎಂ.ಕೆ.ಲೋಕೇಶ್ ಸ್ವಾಗತಿಸಿದರು. ವಕೀಲರ ಸಂಘದ ಮಾಜಿ ಕಾರ್ಯದರ್ಶಿ ಟಿ.ಹನುಮಂತಪ್ಪ ನಿರೂಪಿಸಿದರು. ಹಿರಿಯ ವಕೀಲರಾದ ಬಿ.ಕೆ.ರಹಮತ್ವುಲ್ಲಾ, ವಿಶ್ವನಾಥಯ್ಯ, ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಬಿ.ವಿಶ್ವನಾಥ್, ಡಿ.ವೆಂಕಟೇಶ್ ಸೇರಿದಂತೆ ನೂರಾರು ವಕೀಲರು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *