Breaking
Tue. Dec 24th, 2024

ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ವಾಪಸ್…!

ಬೆಂಗಳೂರು, (ಮೇ 01): ಮಹಿಳೆಯರ ಮೇಲಿನ ಲೈಂಗಿಕ ದೌರ್ಜುನ್ಯ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಎಸ್ಐಟಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಆದ್ರೆ, ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ. ಇನ್ನು ಎ1 ಆರೋಪಿ ಎಚ್ಡಿ ರೇವಣ್ಣ ಅವರು ನಾಳೆ(ಮೇ 02) ವಿಚಾರಣೆಗೆ ಹಾಜರಾಗಲಿದ್ದಾರೆ. ಇದರ ಮಧ್ಯೆ ಪ್ರಕರಣದ ಎ2 ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ದಿಢೀರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷರಾಗಿದ್ದು,ಎಸ್ಐಟಿ ನೋಟಿಸ್ಗೆ ಮೊದಲ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಪ್ರಜ್ವಲ್ ರೇವಣ್ಣ, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನನ್ನ ವಕೀಲರ ಮೂಲಕ ಸಿ.ಐ.ಡಿ ಬೆಂಗಳೂರು ಅವರಿಗೆ ತಿಳಿಸಿದ್ದೇನೆ. ಸತ್ಯ ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ವಿಡಿಯೋ ವೈರಲ್ ಹಾಗೂ ಪ್ರಕರಣ ದಾಖಲಾದ ಬಳಿಕ ಪ್ರಜ್ವಲ್ ರೇವಣ್ಣ ಆವರದ್ದು ಇದು ಮೊದಲ ಪ್ರತಿಕ್ರಿಯೆಯಾಗಿದೆ.

ಪ್ರಜ್ವಲ್ ರೇವಣ್ಣ ಪರ ವಕೀಲ ಹೇಳಿದ್ದೇನು? ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರ ವಕೀಲ ಜಿ.ಅರುಣ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್ ವಿದೇಶದಲ್ಲಿರುವುದರಿಂದ ಕಾಲಾವಕಾಶ ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್ಐಟಿಗೆ ಕಾಲಾವಕಾಶ ಕೇಳಿದ್ದೇನೆ. ಇಂದು (ಮೇ 01) ಮಧ್ಯಾಹ್ನ ಸಿಐಡಿ ಕಚೇರಿಗೆ ತೆರಳಿ 7 ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ. ಆದ್ರೆ, ತನಿಖಾಧಿಕಾರಿಗಳಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಸ್ಐಟಿ ಅಧಿಕಾರಿಗಳು 7 ದಿನ ಸಮಯ ನೀಡುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿರುವುದರಿಂದ ಹಾಸನ ಲೋಕಸಭಾ ಕ್ಷೇತ್ರದ ಮತದಾನ ಮುಗಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರಾತ್ರೋರಾತ್ರಿ ಜರ್ಮಿನಿಗೆ ಹಾರಿದ್ದು, ನಾಡಿದ್ದು ಅಂದರೆ ಮೇ 3ಕ್ಕೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಬಳಿಕ ವಕೀಲರ ಜೊತೆ ಚರ್ಚಿಸಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

ಲುಪ್ತಾನ್ಸಾ ಏರ್ಲೈನ್ಸ್ ಮೂಲಕ ಬೆಂಗಳೂರಿಗೆ ವಿಡಿಯೋ ವೈರಲ್ ಬೆನ್ನಲ್ಲೇ ಜರ್ಮನಿಗೆ ಹಾರಿರುವ ಪ್ರಜ್ವಲ್, ಶುಕ್ರವಾರ (ಮೇ 03)ರ ಮಧ್ಯರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ಫರ್ಟ್  ತೆರಳಿದ್ದು, ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ. ಮೇ3 ರಂದು ಮಧ್ಯಾಹ್ನ 1.30ಕ್ಕೆ ವಿಮಾನ ಫ್ರಾಂಕ್ಫರ್ಟ್ನಿಂದ ಹೊರಡಲಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಲುಪ್ತಾನ್ಸಾ ಏರ್ಲೈನ್ಸ್ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಆಗಮಿಸಲಿದ್ದಾರೆ ತಿಳಿದುಬಂದಿದೆ

Related Post

Leave a Reply

Your email address will not be published. Required fields are marked *