ಚಿತ್ರದುರ್ಗ, ಮೇ. 02 : ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.
ಚಿತ್ರದುರ್ಗ ಶಾಸಕರಾಗಿ ಇದೇ ಪ್ರಥಮ ಬಾರಿಗೆ ಬಿ.ಎಲ್.ವೇಣು ಅವರ ನಿವಾಸಕ್ಕೆ ಆಗಮಿಸಿದ ವೀರೇಂದ್ರ ಪಪ್ಪಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಚಿತ್ರದುರ್ಗ ಕೋಟೆ ಅಭಿವೃದ್ಧಿ, ಕೋಟೆಯಲ್ಲಿ ಪ್ರವಾಸಿಗರಿಗೆ ಅನುಕೂಲಕರವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಬಗ್ಗೆ ಬಿ.ಎಲ್.ವೇಣು ಅವರು ಶಾಸಕರಿಗೆ ಸಲಹೆ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯ ಬಗ್ಗೆ ಕೂಲಂಕುಷವಾಗಿ ಶಾಸಕರೊಂದಿಗೆ ಚರ್ಚಿಸಿದ ವೇಣು ಅವರು, ಜನತೆಗೆ ಅತೀ ಶೀಘ್ರದಲ್ಲೇ ಈ ಯೋಜನೆ ತಲುಪಬೇಕೆಂದು ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಯೋಜನೆ ತ್ವರಿತ ಜಾರಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಟ್ಟಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು.
ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಬಗ್ಗೆಯೂ ಪ್ರಸ್ಥಾಪಿಸಿದ ವೇಣು ಅವರು, ಈ ನಿಟ್ಟಿನಲ್ಲಿ ಕಾರ್ಯ ವಿಳಂಭ ಮಾಡದೇ, ತುರ್ತು ಕೆಲಸಗಳು ಮಾಡುವುದು ಅಗತ್ಯವಿದೆ ಎಂದು ವಿವರಿಸಿದರು. ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳು ಮಾಡುವುದರೊಂದಿಗೆ ಜನಮನ್ನಣೆ ಗಣಿಸಬೇಕೆಂದು ಬಿ.ಎಲ್.ವೇಣು ಅವರು ಶಾಸಕರಿಗೆ ಸೂಚನೆಗಳನ್ನು ನೀಡಿದರು. ಕ್ಷೇತ್ರದ ಅಭಿವೃದ್ಧಿ ದೃಷ್ಠಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ. ಜನರ ನಿರೀಕ್ಷೆಗಳನ್ನು ಯಶಸ್ಸುಗೊಳಿಸುತ್ತೇನೆಂದು ಇದೇ ಸಂದರ್ಭದಲ್ಲಿ ಶಾಸಕರು ಭರವಸೆ ನೀಡಿದರು.