Breaking
Wed. Dec 25th, 2024

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಆಗಲಿರುವ ದಿನಾಂಕ ಯಾವಾಗ ಗೋತ್ತಾ…!

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆದಿದೆ. ಯಾಕಂದ್ರೆ ಕರ್ನಾಟಕದಲ್ಲಿ ಅದ್ರಲ್ಲೂ ನಮ್ಮ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಇದೀಗ 2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಆಗಲಿದೆ. ಹಾಗಾದ್ರೆ ಯಾವ ವೆಬ್‌ಸೈಟ್ ಮೂಲಕ ನೀವು ಫಲಿತಾಂಶ ಪರಿಶೀಲನೆ ಮಾಡಬಹುದು? ರಿಸಲ್ಟ್ ಚೆಕ್ ಮಾಡಲು ಯಾವ ದಿನಾಂಕದ ತನಕ ಕಾಯಬೇಕು? ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಆಗಲಿರುವ ದಿನಾಂಕ ಯಾವುದು? ಮುಂದೆ ಓದಿ. 

ಎಸ್‌ಎಸ್‌ಎಲ್‌ಸಿ ಫಲಿತಾಂಶದ ದಿನಾಂಕ :   2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು & 4.28 ಲಕ್ಷ ಬಾಲಕಿಯರು ಸೇರಿದ್ದರು. ಇದೀಗ, ಇವರೆಲ್ಲರ ಭವಿಷ್ಯ ನಿರ್ಧಾರ ಮಾಡುವ ಫಲಿತಾಂಶ ಬಿಡುಗಡೆ ಆಗಲು ದಿನಗಣನೆ ಆರಂಭ ಆಗಿದೆ. ಮೇ 10 ರಂದು ಈಗ ಫಲಿತಾಂಶ ಬಿಡುಗಡೆ ಆಗುವ ನಿರೀಕ್ಷೆ ಇದೆ. ಇನ್ನು ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು & 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಹೀಗಾಗಿ ಇವರೆಲ್ಲರ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ. 

ರಿಸಲ್ಟ್ ನೋಡುವ ವೆಬ್‌ಸೈಟ್ ವಿಳಾಸ   ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡೋದಕ್ಕೆ, ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್ / ರೋಲ್‌ ನಂಬರ್ ಹೊಂದಿರಬೇಕು. ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಈ ಮೂಲಕವಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ. ಹಾಗೇ ಫಲಿತಾಂಶವನ್ನ ವೀಕ್ಷಿಸಲು ಕೆಲವು ಕಡೆ ವಿಶೇಷ ವ್ಯವಸ್ಥೆ ಮಾಡುವ ನಿರೀಕ್ಷೆ ಇದೆ. 

ಕರ್ನಾಟಕವೇ ಅತ್ಯುತ್ತಮ ರಾಜ್ಯ   ಶೈಕ್ಷಣಿಕ ಗುಣಮಟ್ಟ ವಿಚಾರದಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿ ಆಗಿದೆ. ಅದ್ರಲ್ಲು ನಮ್ಮ ರಾಜ್ಯದಲ್ಲಿ ಅತ್ಯಂತ ಕಠಿಣ ನಿಯಮಗಳ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ಇದೇ ಕಾರಣಕ್ಕೆ ಬೇರೆ ಬೇರೆ ರಾಜ್ಯದಿಂದಲೂ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಬಂದು ಶಿಕ್ಷಣವನ್ನ ಪಡೆಯುತ್ತಾರೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಫಲಿತಾಂಶ ದೇಶದ ಗಮನ ಸೆಳೆದು, ಸುದ್ದಿಯಾಗುತ್ತದೆ.

ಈ ಬಾರಿ ಕೂಡ ಅಷ್ಟೇ ಎಸ್‌ಎಸ್‌ಎಲ್‌ಸಿ ಅಂದ್ರೆ 10ನೇ ತರಗತಿ ಪರೀಕ್ಷೆ ಫಲಿತಾಂಶ ಏನಾಗುತ್ತೆ? ಅನ್ನೋದು ಸಖತ್ ಕುತೂಹಲ ಕೆರಳಿಸಿದೆ. ಹಾಗೇ ಈ ಬಾರಿ ಹುಡುಗಿಯರೇ ಮತ್ತೊಮ್ಮೆ ಟಾಪ್ ಬರ್ತಾರಾ? ಅಥವಾ ಹುಡುಗರು ಇತಿಹಾಸ ಬದಲಿಸ್ತಾರಾ? ಅಂತಾ ಕಾದು ನೋಡಬೇಕಿದೆ. 

Related Post

Leave a Reply

Your email address will not be published. Required fields are marked *