ಚಿತ್ರದುರ್ಗ : ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ ಶುಕ್ರವಾರ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಬೃಹಧಾಕಾರವಾದ ಹೂವಿನ ಹಾರ, ಬಾದಾಮಿ, ದ್ರಾಕ್ಷಿ, ಚೆರ್ರಿ ಫ್ರೂಟ್, ಖರ್ಜೂರಗಳಿಂದ ಸಿಂಗಾರಗೊಂಡಿದ್ದ ಬರಗೇರಮ್ಮನಿಗೆ ರಸ್ತೆಯ ಎಲ್ಲಾ ಭಕ್ತರು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಉರಿ ಬಿಸಿಲಿಗೆ ಕಾದು ಕೆಂಡದಂತಾಗಿದ್ದ ರಸ್ತೆಗೆ ಟ್ರಾಕ್ಟರ್ ಮೂಲಕ ನೀರು ಹರಿಸಲಾಯಿತು. ಉರುಮೆ, ಡೊಳ್ಳು, ಸೋಮನ ಕುಣಿತ, ನಂದಿಕೋಲು, ಚಂಡೆ ವಾದ್ಯ ಇವುಗಳ ಸದ್ದಿಗೆ ಮೆರವಣಿಗೆಯಲ್ಲಿದ್ದ ಸಹಸ್ರಾರು ಯುವಕರು ಕುಣಿದು ಕುಣಿದು ಕುಣಿದು ಕುಣಿತ ಮೆರವಣಿಗೆಯಲ್ಲಿ ಸಂಭ್ರಮಿಸಿದರು.
ಎಸ್.ಎನ್.ರವಿಕುಮಾರ್, ಓಮ್ಕಾರ್ ಇನ್ನು ಅನೇಕ ಪ್ರಮುಖರು ಮೆರವಣಿಗೆಯಲ್ಲಿದ್ದರು.