Breaking
Tue. Dec 24th, 2024

ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ವೇಳಾಪಟ್ಟಿ ಪ್ರಕಟ…!

ಚಿತ್ರದುರ್ಗ. ಮೇ.03: ಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ನಡೆಯಲಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್. 

ಮೇ 9 ರಂದು ಪ್ರಕಟವಾಗಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 16 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮೇ.17 ನಾಮ ಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ. ಜೂನ್ 12 ರಂದು ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಮೇ 2 ರಿಂದಲೇ ಮಾದರಿ ಸಂಹಿತೆ ಜಾರಿಯಲ್ಲಿದೆ. 

ಜಿಲ್ಲೆಯಲ್ಲಿ 4615 ಶಿಕ್ಷಕರು ಮತದಾರರು :  ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಆಗ್ನೇಯ ಶಿಕ್ಷಕರ ಮತದಾರರ ಅಂತಿಮ ಮತದಾರರ ಪಟ್ಟಿಯನ್ನು 2023 ಡಿಸೆಂಬರ್ 30 ರಂದು ಪ್ರಕಟಿಸಲಾಗಿದೆ. ಅಂತಿಮ ಮತದಾರ ಪಟ್ಟಿಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 3238 ಪುರುಷರು, 1377 ಮಹಿಳೆಯರು ಸೇರಿದಂತೆ ಒಟ್ಟು 4615 ಶಿಕ್ಷಕರು ಮತದಾರರು ಇದ್ದಾರೆ. ಇದರ ಅನ್ವಯ ಮೊಳಕಾಲ್ಮುರು ತಾಲ್ಲೂಕಿನಲ್ಲಿ 210 ಪುರುಷರು, 43 ಮಹಿಳೆಯರು ಸೇರಿದಂತೆ ಒಟ್ಟು 253 ಶಿಕ್ಷಕರು ಮತದಾರರಿದ್ದಾರೆ. ಚಳ್ಳಕರೆ ತಾಲ್ಲೂಕಿನಲ್ಲಿ 683 ಪುರುಷರು, 220 ಮಹಿಳೆಯರು ಸೇರಿ ಒಟ್ಟು 903 ಶಿಕ್ಷಕರು ಮತದಾರರಿದ್ದಾರೆ. ಚಿತ್ರದುರ್ಗ ತಾಲೂಕಿನಲ್ಲಿ 929 ಪುರುಷರು, 590 ಮಹಿಳೆಯರು ಸೇರಿ ಒಟ್ಟು 1519 ಶಿಕ್ಷಕರು ಮತದಾರರಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ 571 ಪುರುಷರು, 251 ಮಹಿಳೆಯರು ಸೇರಿ ಒಟ್ಟು 822 ಶಿಕ್ಷಕರು ಮತದಾರರಿದ್ದಾರೆ. ಹೊಸದುರ್ಗ ತಾಲ್ಲೂಕಿನಲ್ಲಿ 499 ಪುರುಷರು, 16 ಮಹಿಳೆಯರು ಸೇರಿ ಒಟ್ಟು 665 ಶಿಕ್ಷಕರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 346 ಪುರುಷರು, 107 ಮಹಿಳೆಯರು ಸೇರಿ ಒಟ್ಟು 453 ಮತದಾರರು ಜಿಲ್ಲೆಯಲ್ಲಿ ಒಟ್ಟು 4615 ಶಿಕ್ಷಕರು ಮತದಾರರಿದ್ದಾರೆ. 

ಮತದಾರರ ಪಟ್ಟಿಗೆ ಸೇರ್ಪಡೆಗೆ ಮೇ 6 ಕಡೆಯ ದಿನ : ಮತದಾರರ ಪಟ್ಟಿಗೆ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಮೇ 6 ಅಂತಿಮ ದಿನವಾಗಿದೆ. ಅರ್ಹ ಮತದಾರರ ಪಟ್ಟಿಗೆ ಸೇರ್ಪಡೆಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ ತಿಂಗಳಿನಿಂದ ನಿರಂತರ ಪರಿಷ್ಕರಣೆ ಸ್ವೀಕೃತ ಅರ್ಜಿಗಳು ಹಾಗೂ ಮೇ 6 ಸಂಜೆ 05:30 ಗಂಟೆಯಿಂದ ಸ್ವೀಕರಿಸಲ್ಪಟ್ಟ ಅರ್ಜಿಗಳನ್ನು ನಿಯಮಾನುಸಾರ ಮತದಾರರಪಟ್ಟಿಗೆ ಸೇರಿಸಲು ಕ್ರಮಕೈಗೊಳ್ಳಲು ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Post

Leave a Reply

Your email address will not be published. Required fields are marked *