Breaking
Tue. Dec 24th, 2024

ಸಿದ್ಧಾರ್ಥ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ನವಜಾತ ಶಿಶುಗಳು ಹಾಗೂ ಚರ್ಮ ರೋಗ ಸಂಬಂಧಿತ ಅತ್ಯಾಧುನಿಕ ಒಪಿಡಿ ಲೋಕಾರ್ಪಣೆ…!

ತುಮಕೂರು: ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ‘ಹೊರರೋಗಿಗಳ ವಿಸ್ತರಣಾ ಘಟಕದಲ್ಲಿ ಹೊಸದಾಗಿ ನವಜಾತ ಶಿಶುಗಳ ಎನ್‌ಐಸಿಯು, ಪಿಐಸಿಯು, ಲೇಬರ್ ಕೊಠಡಿ, ಸೌಂದರ್ಯವರ್ಧಕ ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಲ್ಯಾಬ್ ಉದ್ಘಾಟನೆಯನ್ನು ಇದೇ ಮೇ ೬ಕ್ಕೆ ಬೆಳಗ್ಗೆ ೧೦ಗಂಟೆಗೆ ವೈದ್ಯಕೀಯ ಕಾಲೇಜಿನಲ್ಲಿ ಉದ್ಘಾಟಿಸಲಾಗುವುದು ಎಂದು ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಜಿ ಎನ್ ಪ್ರಭಾಕರ್ ತಿಳಿಸಿದರು. 

ಪತ್ರಿಕಾಗೋಷಿಯಲ್ಲಿ ಮಾತನಾಡಿ ಅವರು, ತುಮಕೂರಿನಂತಹ ನಗರದಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಸಿದ್ಧಾರ್ಥ ಆಸ್ಪತ್ರೆಯಲ್ಲಿ ಆಧುನಿಕ ಉಪಕರಣಗಳನ್ನು ಅಳವಡಿಸಿಕೊಂಡು  ಚಿಕಿತ್ಸಾ ವಿಧಾನವನ್ನು ಮೇಲೆರ್ಜೆಗೆರಿಸಿ ಬಡವರಿಗೂ  ಲಭ್ಯವಾಗುವ ದರದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ, ಆನಿಟ್ಟಿನಲ್ಲಿ ಎನ್‌ಐಸಿಯು, ಪಿಐಸಿಯು, ಲೇಬರ್ ಕೊಠಡಿ, ಸೌಂದರ್ಯವರ್ಧಕ ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. 

ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಬಿ ಸಾಣಿಕೊಪ್ ಮಾತನಾಡಿ, ಮೇ 6ರಂದು ಬೆಳಗ್ಗೆ 10 ಗಂಟೆಗೆ ಎನ್‌ಐಸಿಯು, ಪಿಐಸಿಯು, ಹೆರಿಗೆ ಕೊಠಡಿ, ಸೌಂದರ್ಯವರ್ಧಕ ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಲ್ಯಾಬ್ ಉದ್ಘಾಟನೆಯನ್ನು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ. 

ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಕನ್ನಿಕಾ ಪರಮೇಶ್ವರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾಹೇ ಉಪಕುಲಪತಿ ಡಾ ಕೆ ಬಿ ಲಿಂಗೇಗೌಡ, ಸಾಹೇ ರಿಜಿಸ್ಟ್ರಾರ್ ಡಾ.ಎಂ.ಝಡ್ ಕುರಿಯನ್, ಸಾಹೇ ವಿವಿಯ ಪರೀಕ್ಷಾ ನಿಯಂತ್ರಣಕರಾದ ಡಾ ಗುರುಶಂಕರ್, ವೈದ್ಯಕೀಯ ಮೇಲ್ವಿಚಾರಕರಾದ ಡಾ.ಎನ್ ಎಸ್ ವೆಂಕಟೇಶ್, ಸಾಹೇ ವಿವಿಯ ಕುಲಾಧಿಪತಿ ಸಲಹೆಗಾರರಾದ ಡಾ ವಿವೇಕ್ ವೀರಯ್ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ವೈದ್ಯಕೀಯ ಮೇಲ್ವಿಚಾರಕರಾದ ಡಾ.ಎನ್ ಎಸ್ ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಸಿದ್ದಾರ್ಥ ವೈದ್ಯಕೀಯ ಮೇಲ್ವಿಚಾರಕರಾದ ಡಾ.ಎನ್ ಎಸ್. ವೆಂಕಟೇಶ್‌, ಸಾಹೇ ವಿವಿಯ ಕುಲಾಧಿಪತಿ ಸಲಹೆಗಾರರಾದ ಡಾ ವಿವೇಕ್ ವೀರಯ್ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ವೈದ್ಯಕೀಯ ಮೇಲ್ವಿಚಾರಕರಾದ ಡಾ.ಎನ್ ಎಸ್ ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ವಿಮೆ ಸೌಲಭ್ಯಗಳು ಆಸ್ಪತ್ರೆಯ ರೋಗಿಗಳಿಗೆ ಲಭ್ಯವಿದೆ. ಹಾಗಾಗಿ ಅತ್ಯಾಧುನಿಕ ಚಿಕಿತ್ಸೆ ಪಡೆಯಬಹುದು. ನುರಿತ ವೈದ್ಯಕೀಯ ತಂಡ ಎಲ್ಲಾ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಪ್ರಸೂತಿ ತಜ್ಞರಾದ ಡಾ ಇಂದಿರಾ, ಚರ್ಮರೋಗ ತಜ್ಞರಾದ ಡಾ. ಶಿವಾನಂದ, ಡಾ. ಕಿರಣ್, ಡಾ ಅರುಣ್, ಡಾ. ಪ್ರಸನ್ನಕುಮಾರ್ ಭಾಗವಹಿಸಿದ್ದರು. 

Related Post

Leave a Reply

Your email address will not be published. Required fields are marked *