ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಿ…!

ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. 

ಈ ಸಂಬಂಧ ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಇದುವರೆವಿಗೂ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮ ಮದ್ಯ ಮಾರಾಟ ತಡೆಗಟ್ಟಿ ಗ್ರಾಮದಲ್ಲಿ ನೆಮ್ಮದಿ ನೆಲೆಸುವಂತೆ ಮಾಡಿ ಎಂದು ಮಹಿಳೆಯರು ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು. 

 ಕೃಷ್ಣಮೂರ್ತಿ, ಡಿಂಗ್ರಿನಾಗರಾಜ್, ಪುಟ್ಟಕ್ಕ, ಶಿವಮ್ಮ, ರಮೇಶ್, ತಿಪ್ಪಮ್ಮ, ಶಿಲ್ಪ, ಮಲ್ಲಮ್ಮ, ಸುಮಲತ, ರೈತ ಮುಖಂಡ ಕೆ.ಪಿ.ಭೂತಯ್ಯ, ಶಿವಕುಮಾರ್, ರಾಜಣ್ಣ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related Post

Leave a Reply

Your email address will not be published. Required fields are marked *