ಬೆಂಗಳೂರು : ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯ ಸಮೀಪದ ಐಟಿಸಿ ರಸ್ತೆಯಲ್ಲಿ ನಡೆದಿದೆ.
ಕಾರ್ತಿಕೇಯನ್ (40) ಹತ್ಯೆಯಾದ ರೌಡಿ ಶೀಟರ್. ಇಂದು ಸಂಜೆ ಸುಮಾರಿಗೆ ಮಾರಕಾಸ್ತ್ರ ಬಂದ ಹಂತಕರು ಕಾರ್ತಿಕೇಯನ್ ನನ್ನ ನಡು ರಸ್ತೆಯಲ್ಲಿ ಕೊಚ್ಚಿ ಕೊಂಡು ಪರಾರಿಯಾಗಿದ್ದಾರೆ.
ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೇ ದ್ವೇಷದ ಹಿನ್ನೆಲೆ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಬಾಣಸವಾಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.