ಬೆಂಗಳೂರು : ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಿಯಾಗಿ ಊಟ ಮಾಡದ ಕಾರಣ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದೆ.
ಅಲ್ಲದೇ ಚಿಕ್ಕದಾಗಿ ಹರ್ನಿಯಾ ಸಮಸ್ಯೆ ಇರೋದು ಪತ್ತೆಯಾಗಿದೆ. ಹೀಗಾಗಿ ವಿಕ್ಟೋರಿಯಾ ಗ್ಯಾಸ್ಟ್ರೋಎಂಟ್ರಾಲಜಿ ವೈದ್ಯರಿಂದ ತಪಾಸಣೆ ಮಾಡಿಸಲು ಹಾಗೂ ಕಾರ್ಡಿಯಾಲಜಿಸ್ಟರ್ ಓಪಿನಿಯನ್ ತೆಗೆದುಕೊಳ್ಳಲು ಬೌರಿಂಗ್ ಆಸ್ಪತ್ರೆಯ ವೈದ್ಯರು ಸೂಚನೆ ನೀಡಿದ್ದಾರೆ.
ವಿಕ್ಟೋರಿಯಾ ಆವರಣದ ಪಿಎಂಎಸ್ ವೈ ಆಸ್ಪತ್ರೆಯಲ್ಲಿ ಕಾರ್ಡಿಯಾಲಾಜಿಸ್ಟ್ ಮತ್ತು ಗ್ಯಾಸ್ಟ್ರೋ ಎಂಟ್ರೋಲಜಿಗೆ ನುರಿತ ತಜ್ಞರು ಇದ್ದು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ.
ಕಳೆದ ಬಾರಿ ರೇವಣ್ಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರಿಂದ ಈ ಬಾರಿ ಖಾಕಿ ಕಣ್ಗಾವಲು ಇಟ್ಟಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಯಾರಿಕೇಡ್ ಗಳನ್ನ ಹಾಕಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.