ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್ ಕಪ್‍ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.
ಐಸಿರಿ, ಸಮೃದ್ದಿ, ಚಳ್ಳಕೆರೆ ಟೋಲ್‍ಗೇಟ್‍ನಲ್ಲಿ ರವಿ ಬಾರ್ ಅಂಡ್ ರೆಸ್ಟೊರೆಂಟ್ ಹಾಗೂ ಮಧುಲೋಕ ಬಾರ್‍ಗಳ ಮೇಲೆ ದಾಳಿ ನಡೆಸಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಲೋಟಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿ ಇನ್ನು ಮುಂದೆ ಬಳಸಿದರೆ ಪರವಾನಗಿ ರದ್ದುಗೊಳಿಸುವುದಾಗಿ ಬಾರ್ ಮಾಲೀಕರುಗಳಿಗೆ ಎಚ್ಚರಿಕೆ ನೀಡಿದರು.
ನಗರಸಭೆ ಪರಿಸರ ಇಂಜಿನಿಯರ್ ಜಾಫರ್, ಹೆಲ್ತ್ ಇನ್ಸ್‍ಪೆಕ್ಟರ್‍ಗಳಾದ ಸರಳ, ಭಾರತಿ, ನಾಗರಾಜ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ದಾಳಿಯಲ್ಲಿ ಪಾಲ್ಗೊಂಡಿದ್ದರು.