ಹಿರಿಯೂರು : ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದೆ.
ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಜನ ಸುಸ್ತಾಗಿ ಹೋಗಿದ್ದರು. ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಾಗಿರಲಿಲ್ಲ. ಇಂದು ಸಂಜೆಯಿಂದ ಹಿರಿಯೂರು ತಾಲ್ಲೂಕಿನಾದ್ಯಂತ ಮಳೆ, ಜನರಿಗೆ ಕೊಂಚ ಸಮಾಧಾನ ತಂದಿದೆ. ಸುಮಾರು ಅರ್ಧ ಗಂಟೆಗಳ ಕಾಲ ಮಳೆಸುರಿದೆ.
ತಾಲ್ಲೂಕಿನಲ್ಲಿ ಮಳೆ ಬಾರದ ಅಡಿಕೆ, ತೆಂಗು, ಬಾಳೆ ಸೇರಿದಂತೆ ಇನ್ನೀತರ ತೋಟಗಾರಿಕೆ ಬೆಳೆಗಳು ಒಣಗಿ ಹೋಗಿವೆ. ಅಡಿಕೆ ತೋಟ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ಮೊರೆ ಹೋಗಿದ್ದರು. ಅಡಿಕೆ ಗಿಡಗಳಿಗೆ ಟ್ಯಾಂಕರ್ ನೀರು ಬಿಡುವ ಮೂಲಕ ತೋಟ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಇನ್ನು ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಳೆ ಬಂದಿದ್ದು ರೈತರ ಮುಖದಲ್ಲಿ ಸಂತಸ ತಂದಿದೆ.