Breaking
Wed. Dec 25th, 2024

ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ ಪ್ರಕರಣದ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ…!

ಹಾಸನ : ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ ಪ್ರಕರಣದ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಚನ್ನರಾಯಪಟ್ಟಣ ಹೆಚ್ಚುವರಿ ಅಪರ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ನಟೋರಿಯಸ್ ರೌಡಿ ಯಾಚೇನಹಳ್ಳಿ ಚೇತು ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಲೆ ನಡೆದು ಹತ್ತೇ ತಿಂಗಳಲ್ಲಿ ವಿಚಾರಣೆ ಮುಗಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

2023 ರ ಜುಲೈ 4 ರಂದು ಚನ್ನರಾಯಪಟ್ಟಣದ ಮುಖ್ಯ ರಸ್ತೆಯಲ್ಲಿ ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಆರೋಪಿಗಳು ಹತ್ಯೆಗೈದಿದ್ದರು. ಗುಲ್ಬರ್ಗ ಜೈಲಲ್ಲಿ ಇದ್ದುಕೊಂಡೇ ಮಾಸ್ತಿಗೌಡ ಎಂಬಾತನನ್ನು ಯಾಚೇನಹಳ್ಳಿ ಚೇತು ಕೊಲೆ ಮಾಡಿದ್ದಾನೆ.

 ಯಾಚೇನಹಳ್ಳಿ ಚೇತನ್, ಮಂಡ್ಯ ಶಿವು ಅಲಿಯಾಸ್ ಶಿವಕುಮಾರ್, ಉಲಿವಾಲ ಚೇತು, ರಾಕಿ ಅಲಿಯಾಸ್ ರಾಕೇಶ್, ಸುಮಂತ, ಭರತ್, ಹರೀಶ್, ಮೊಟ್ಟೆ ಅಲಿಯಾಸ್ ರಾಹುಲ್ ಮತ್ತು ರಾಘು ಅಲಿಯಾಸ್ ರಾಘವೇಂದ್ರಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 

ಪ್ರಕರಣದ ಮತ್ತಿಬ್ಬರು ಆರೋಪಿಗಳಿಗೆ ತಲಾ 2.5 ಜೈಲು ಶಿಕ್ಷೆ ವಿಧಿಸಲಾಗಿದೆ. ಇನ್ಸ್ಪೆಕ್ಟರ್ ವಸಂತಕುಮಾರ್ ಕೆ.ಎಂ. ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಚನ್ನರಾಯಪಟ್ಟಣ ಭಾಗದಲ್ಲಿ ರೌಡಿ ಚಟುವಟಿಕೆ ಮಟ್ಟಹಾಕುವ ಅಗತ್ಯ ಪೊಲೀಸ್ ಕಟ್ಟುನಿಟ್ಟಿನ ಕ್ರಮ ವಹಿಸಿದ್ದರು.

Related Post

Leave a Reply

Your email address will not be published. Required fields are marked *