ಚಿತ್ರದುರ್ಗ. ಮೇ.08: ಬರಗಾಲದ ಹಿನ್ನಲೆಯಲ್ಲಿ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಈ ಯೋಜನೆ ಹಾಗೂ ವಿವಿ ಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನ ಇದೇ ಮೇ 10 ರಿಂದ 25 ದಿನಗಳ ಕಾಲ ವಾಣಿ ವಿಲಾಸ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಬೇಸಿಗೆ ಹಂಗಾಮಿಗೆ ಎರಡನೇ ಬಾರಿ ನೀರು ಹರಿಸಲು ತೀರ್ಮಾನಿಸಲಾಯಿತು.
ವಾಣಿವಿಲಾಸ ಸಾಗರ ಜಲಾಶಯದ ಅಚ್ಚು ಪ್ರದೇಶಕ್ಕೆ 2023-24ನೇ ಸಾಲಿನಲ್ಲಿ ಅತೀ ಕಡಿಮೆ ಮಳೆಯಾಗುತ್ತಿದೆ, ರೈತರ ಜಮೀನುಗಳಿಗೆ ನೀರು ಹರಿಸುವುದು ಅವಶ್ಯವಾಗಿದೆ. ಈ ಹಿನ್ನಲೆ ವಾಣಿವಿಲಾಸ ಸಾಗರ ಜಲಾಶಯ ಅಚ್ಚುಕಟ್ಟು ಪ್ರದೇಶಕ್ಕೆ ಬೇಸಿಗೆ ಹಂಗಾಮಿಗೆ ಎರಡನೇ ನೀರು ಬಿಡುಗಡೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಬರಗಾಲ ಹಾಗೂ ಈ ಸಂದರ್ಭದಲ್ಲಿ ವಿವಿ ಸಾಗರ ಅಚ್ಚುಕಟ್ಟು ಪ್ರದೇಶದ ರೈತರು ನೀರನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರು ವ್ಯರ್ಥ ಮಾಡಬಾರದು. ಅಗತ್ಯ ಹಾಗೂ ಅನಿವಾರ್ಯ ಇರುವ ಕಡೆ ಮಾತ್ರ ನೀರು ಬಳಕೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಬೀಳು ಭೂಮಿಗೆ ಅನಾವಶ್ಯಕವಾಗಿ ನೀರು ಹರಿಸಬಾರದು. ಅನಾವಶ್ಯಕವಾಗಿ ವ್ಯರ್ಥವಾಗುವುದು ಕಂಡು ಬಂದರೆ ನೀರು ಸ್ಥಗಿತಗೊಳಿಸುವುದರಿಂದ ನೀರು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ ಅವರು, ಟ್ಯಾಂಕರ್ ಮೂಲಕ ವಾಣಿಜ್ಯ ಉದ್ದೇಶಕ್ಕಾಗಿ ಮಾರಾಟ ಮಾಡಬಾರದು. ಒಂದು ವೇಳೆ ವಾಣಿಜ್ಯ ಬಳಕೆಗಾಗಿ ನೀರು ಬಳಕೆಯನ್ನು ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನೀರು ಹರಿಸುವ ಮುನ್ನ ಅಚ್ಚುಕಟ್ಟು ಪ್ರದೇಶದಲ್ಲಿನ ಬೋರ್‌ವೆಲ್‌ಗಳಲ್ಲಿ ಮಟ್ಟ ಹಾಗೂ ನೀರು ಹರಿಸಿದ ನಂತರ ನೀರಿನ ಮಟ್ಟದ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್.
ವಿವಿ ಸಾಗರ ನೀರಿನ ಪ್ರಮಾಣದ ವಿವರ: ವಿವಿ ಸಾಗರ ಜಲಾಶಯದ ಒಟ್ಟು ನೀರಿನ ಸಂಗ್ರಹಣಾ ಸಾಮರ್ಥ್ಯವು 30.422 ಟಿಎಂಸಿಗಳಾಗಿದ್ದರೆ, ಜಲಾಶಯದ ಯೋಜನೆಗಳು ಒಟ್ಟು 12135.00 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಾಗಿದೆ, ಇದರಲ್ಲಿ ಪ್ರಮುಖವಾಗಿ ತೋಟದ ಬೆಳೆಗಳು ತೆಂಗು, ಅಡಿಕೆ, ಬಾಳೆ 5557.00 ಹೆಕ್ಟೇರ್ ಆಗಿರುತ್ತದೆ. ಉಳಿದಂತೆ 6578.00 ಹೆಕ್ಟೇರ್ ಖುಷ್ಕಿ ಜಮೀನು ಇರುತ್ತದೆ.
ಮೇ 08ರಂದು ವಿವಿ ಸಾಗರ ಜಲಾಶಯದಲ್ಲಿ 112 ಅಡಿ ನೀರು ಸಂಗ್ರಹವಾಗಿದೆ, ಈ ಮಟ್ಟಕ್ಕೆ ನೀರಿನ ಸಂಗ್ರಹಣೆಯು 16.96 ಟಿಎಂಸಿಗಳಲ್ಲಿ, ಇದರಲ್ಲಿ 1.87 ಟಿಎಂಸಿ ಬಳಕೆಗೆ ಬಾರದ ಪ್ರಮಾಣ ಹಾಗೂ ಬಳಕೆಗೆ ಬರುವ ನೀರಿನ ಪ್ರಮಾಣ 15.09 ಟಿಎಂಸಿ ಇರುತ್ತದೆ. ಹಿರಿಯೂರು ಪಟ್ಟಣದ ಕುಡಿಯುವ ನೀರಿಗಾಗಿ, ಚಿತ್ರದುರ್ಗ ಪಟ್ಟಣದ ಕುಡಿಯುವ ನೀರಿಗಾಗಿ ಮತ್ತು ಚಳ್ಳಕೆರೆ ಪಟ್ಟಣ, ಸಂಶೋಧನಾ ಕೇಂದ್ರಗಳು ಹಾಗೂ 18 ಹಳ್ಳಿಗಳ ಕುಡಿಯುವ ನೀರಿಗಾಗಿ ಒಟ್ಟು 0.2115 ಟಿಎಂಸಿ ಅಗತ್ಯವಿದೆ.
ಹಾಲಿ ಅಚ್ಚುಕಟ್ಟು ಪ್ರದೇಶದ ಜಲಾಶಯದಿಂದ ಮಳೆಗಾಲದ ಬೆಳೆ ಹಾಗೂ ತೋಟಗಾರಿಕೆ ಹದ ನೀರನ್ನು 30 ದಿನ ಹರಿಸಿದರೆ ಸರಾಸರಿ ನೀರಿನ ಪ್ರಮಾಣ 1.40 ಟಿಎಂಸಿ. ಆವಿಯಾಗುವ ನೀರಿನ ಪ್ರಮಾಣ ಸುಮಾರು 0.516 ಟಿಎಂಸಿ, ಒಟ್ಟು ಬಳಕೆಯಾಗುವ ನೀರಿನ ಪ್ರಮಾಣ 2.127 ಟಿಎಂಸಿ, ಜಲಾಶಯದಲ್ಲಿ ಉಳಿಯಬಹುದಾದ ನೀರಿನ ಪ್ರಮಾಣ 14.83 ಟಿಎಂಸಿ (111.55 ಅಡಿಗಳು) ಇರಲಿದೆ. ಮೇಲ್ಮಟ್ಟದ ಕಾಲುವೆ ಅಚ್ಚುಕಟ್ಟು ಪ್ರದೇಶದ 03 ಗ್ರಾಮಗಳು, ಬಲನಾಳ ಅಚ್ಚುಕಟ್ಟು ಪ್ರದೇಶದ 21 ಗ್ರಾಮಗಳು ಹಾಗೂ ಎಡನಾಳ ಅಚ್ಚುಕಟ್ಟು ಪ್ರದೇಶದ 18 ಗ್ರಾಮಗಳು ಹಾಗೂ ನಾಲೆಗಳಲ್ಲಿ ನೀರನ್ನು ಬಿಟ್ಟಾಗ ಹಿರಿಯೂರು ತಾಲೂಕಿನ 38 ಗ್ರಾಮಗಳ ಅಂತರ್ಜಲ ಅಭಿವೃದ್ಧಿಯಾಗಿ ಸಾರ್ವಜನಿಕರಿಗೆ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಸುರಕ್ಷಿತವಾಗಿದೆ.
ಸಭೆಯಲ್ಲಿ ವಿಶ್ವೇಶ್ವರಯ್ಯ ಜಲನಿಗಮದ ವಿವಿ ಸಾಗರ ಉಪವಿಭಾಗದ ಹಿರಿಯ ಕಾರ್ಯಪಾಲಕ ಇಂಜಿನಿಯರ್ ಬಾರಿಕರ್ ಚಂದ್ರಪ್ಪ, ಸಹಾಯ ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಎಂ.ವಿ.ಮಾ.ಅಜುನಾಥ್, ಶಿರಸ್ತೇದಾರ ಸಣ್ಣಪ್ಪ, ವಿವಿ ಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸದಸ್ಯರಾದ ಸುಂದರೇಶ್, ಅಸಿಲ್ ಆಲಿ, ಅನಿಲ್ ಕುಮಾರ್, ನಾಗರಾಜ್ ಸೇರಿದಂತೆ ಸೇರಿಸಲಾಗಿದೆ. .